ಮಲ್ಪೆ ಬಂದರಿನಲ್ಲಿ ಮೀನು ಆಯುವ 7 ಮಕ್ಕಳ ರಕ್ಷಣೆ

ಮಲ್ಪೆ, ಅ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮೀನುಗಾರಿಕೆ ಇಲಾಖೆ, ಕಾರ್ಮಿಕ ಇಲಾಖೆ, ಉಡುಪಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಸಾಮಾಜಿಕ ಕಾರ್ಯಕರ್ತರು ಹಾಗೂ ಸ್ಪೂರ್ತಿ ವಿಶ್ವಾಸದ ಮನೆಯ ಮುಖ್ಯಸ್ಥರ ಸಹಯೋಗದೊಂದಿಗೆ ಶುಕ್ರವಾರ ಮಲ್ಪೆ ಬಂದರಿನಲ್ಲಿ ಮೀನು ಆಯುವ ಮಕ್ಕಳ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.
ಈ ಕಾರ್ಯಚರಣೆಯಲ್ಲಿ 5 ಗಂಡು ಮಕ್ಕಳನ್ನು ಹಾಗೂ ಅಲ್ಲಿಯೇ ಕೆಲಸ ಮಾಡುತ್ತಿರುವ 2 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಲಾಯಿತು. ಬಳಿಕ ಎಲ್ಲಾ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರ ಆದೇಶದ ಮೇರೆಗೆ 6 ಬಾಲಕರಿಗೆ ಬಾಲಕರ ಬಾಲ ಮಂದಿರದಲ್ಲಿ ಪುನರ್ವಸತಿ ಕಲ್ಪಿಸಲಾ ಯಿತು. ಓರ್ವ ಬಾಲಕನನ್ನು ಅನಾರೋಗ್ಯದ ಸಮಸ್ಯೆಯಿಂದ ಪೋಷಕರ ವಶಕ್ಕೆ ಒಪ್ಪಿಸ ಲಾಯಿತು.
Next Story





