Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಫಾರಂ...

ಉಡುಪಿ: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಫಾರಂ -7 ದುರ್ಬಳಕೆ ತಡೆಯುವಂತೆ ಮುಸ್ಲಿಮ್ ಒಕ್ಕೂಟ ಮನವಿ

ವಾರ್ತಾಭಾರತಿವಾರ್ತಾಭಾರತಿ6 Oct 2026 6:46 PM IST
share
ಉಡುಪಿ: ಎಸ್‌ಐಆರ್ ಪ್ರಕ್ರಿಯೆಯಲ್ಲಿ ಫಾರಂ -7 ದುರ್ಬಳಕೆ ತಡೆಯುವಂತೆ ಮುಸ್ಲಿಮ್ ಒಕ್ಕೂಟ ಮನವಿ

ಉಡುಪಿ: ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಡೆಯು ತ್ತಿರುವ ಸಂದರ್ಭದಲ್ಲಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದು ಹಾಕಲು ಬಳಸಲಾಗುವ ಫಾರಂ-7 ಅರ್ಜಿಗಳ ದುರುಪಯೋಗ ಆಗದಂತೆ ತಡೆಯಬೇಕು ಮತ್ತು ಯಾವುದೇ ಕಾರಣಕ್ಕೂ ಅರ್ಹ ಮತದಾರರ ಮತದಾರರ ಪಟ್ಟಿಯಿಂದ ಕೈಬಿಡದಂತೆ ಎಚ್ಚರಿಕೆ ವಹಿಸಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ನಿಯೋಗ ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿತು.

ಅರ್ಹ ಮತದಾರರ ಹೆಸರನ್ನು ಯಾವುದೇ ಅನ್ಯಾಯ ಅಥವಾ ತಪ್ಪು ಮಾಹಿತಿಯ ಆಧಾರದ ಮೇಲೆ ಮತದಾರರ ಪಟ್ಟಿಯಿಂದ ಕೈಬಿಡುವುದು ಅವರ ಮೂಲಭೂತ ಪ್ರಜಾಪ್ರಭುತ್ವದ ಹಕ್ಕಿನ ಮೇಲೆ ನೇರ ಪರಿಣಾಮ ಬೀರುವ ಗಂಭೀರ ವಿಷಯವಾಗಿದೆ. ಆದ್ದರಿಂದ ಎಸ್‌ಐಆರ್ ಪ್ರಕ್ರಿಯೆ ಯಲ್ಲಿ ಸಂಪೂರ್ಣ ಪಾರದರ್ಶಕತೆ, ನಿಷ್ಪಕ್ಷಪಾತತೆ ಮತ್ತು ನಿಯಮಾನುಸಾರ ಕ್ರಮಗಳನ್ನು ಖಚಿತಪಡಿಸುವುದು ಅತ್ಯಂತ ಅಗತ್ಯವಾಗಿದೆ.

ಆದುದರಿಂದ ಉಡುಪಿ ಜಿಲ್ಲೆಯಲ್ಲಿ ಈವರೆಗೆ ಸ್ವೀಕರಿಸಲಾದ ಫಾರಂ-7 ಅರ್ಜಿಗಳು, ಸ್ವೀಕರಿಸಲಾದ, ಅಂಗೀಕರಿಸಲಾದ ಮತ್ತು ತಿರಸ್ಕೃರಿಸಲ್ಪಟ್ಟ ಅರ್ಜಿಗಳು ಮಾಹಿತಿ ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕು. ಮತದಾರರ ಹೆಸರು ತೆಗೆದುಹಾಕುವ ಮೊದಲು ಸಂಬಂಧಪಟ್ಟ ಮತದಾರ ರಿಗೆ ನೋಟಿಸ್ ನೀಡಿ, ಆಕ್ಷೇಪಣೆ ಸಲ್ಲಿಸಲು ಹಾಗೂ ವಿಚಾರಣೆಯಲ್ಲಿ ತಮ್ಮ ವಾದ ಮಂಡಿಸಲು ಅವಕಾಶ ನೀಡಲಾಗಿದೆಯೇ ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು.

ಫಾರಂ- ೭ ದುರುಪಯೋಗವಾಗದಂತೆ ಹಾಗೂ ಅರ್ಹ ಮತದಾರರ ಹೆಸರುಗಳು ತಪ್ಪಾಗಿ ಕೈಬಿಡದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಇಲಾಖೆ ಕ್ರಮಕೈಗೊಳ್ಳಬೇಕು. ಅಲ್ಪಸಂಖ್ಯಾತರು, ದಲಿತರು ಹಾಗೂ ಇತರ ದುರ್ಬಲ ವರ್ಗಗಳಿಗೆ ಸೇರಿದ ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಕೈಬಿಡದಂತೆ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಒಕ್ಕೂಟ ಮನವಿಯಲ್ಲಿ ಒತ್ತಾಯಿಸಿದೆ.

ಯಾವುದೇ ಸಮುದಾಯದ ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗದಂತೆ, ಚುನಾವಣಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕಾಪಾಡುವುದು ಚುನಾವಣಾ ವ್ಯವಸ್ಥೆಯ ಅತ್ಯಂತ ಮಹತ್ವದ ಜವಾಬ್ದಾರಿ ಯಾಗಿದೆ. ಆದ್ದರಿಂದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಹಾಗೂ ನ್ಯಾಯಸಮ್ಮತತೆಯನ್ನು ಖಚಿತಪಡಿಸಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮನವಿಯಲ್ಲಿ ಒತ್ತಾಯಿಸಿದೆ.

ಮನವಿಯನ್ನು ಸ್ವೀಕರಿಸಿ ತಕ್ಷಣ ಸ್ಪಂದಿಸಿದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಈ ಸಂಬಂಧ ಅಗತ್ಯ ಮಾಹಿತಿಯನ್ನು ನಿಯೋಗಕ್ಕೆ ಒದಗಿಸಿದರು. ಅಲ್ಲದೆ ಈವರೆಗೆ ಯಾರನ್ನೂ ಕೂಡ ಪಟ್ಟಿಯಿಂದ ಡಿಲೀಟ್ ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನಿಯೋಗದಲ್ಲಿ ಒಕ್ಕೂಟದ ಜಿಲ್ಲಾಧ್ಯಕ್ಷ ಮೊಹಮ್ಮದ್ ಮೌಲಾ, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಕಾರ್ಯದರ್ಶಿ ಜಫ್ರುಲ್ಲಾ ತೋನ್ಸೆ, ಜಿಲ್ಲಾ ಸದಸ್ಯರಾದ ಪೀರು ಸಾಹೇಬ್, ಉಡುಪಿ ತಾಲೂಕು ಜತೆ ಕಾರ್ಯದರ್ಶಿ ಫೈಝ್ ಅಹ್ಮದ್ ಆದಿಉಡುಪಿ, ಜಮೀಯ್ಯತುಲ್ ಫಲಾಹ ಉಡುಪಿ ತಾಲೂಕು ಘಟಕದ ಕಾರ್ಯದರ್ಶಿ ಸಮೀರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X