Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ...

ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಮನವಿ

ವಾರ್ತಾಭಾರತಿವಾರ್ತಾಭಾರತಿ8 Oct 2026 7:08 PM IST
share
ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಮನವಿ

ಉಡುಪಿ, ಅ.8: ರಾಜ್ಯಾದ್ಯಂತ ನಡೆದಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ ತಡೆಯುವುದು ಹಾಗೂ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಸ್ವರೂಪ ಟಿ ಕೆ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಬಳಸಲಾಗುವ ಫಾರಂ-7 ಅರ್ಜಿಗಳ ದುರುಪಯೋಗ ವಾಗುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಆತಂಕ ಹಾಗೂ ಸಂಶಯಗಳು ವ್ಯಕ್ತವಾಗುತ್ತಿವೆ. ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳಾದ ಕ್ರೈಸ್ತರು ಹಾಗೂ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಇಂತಹ ಅರ್ಜಿ ಗಳನ್ನು ಸಲ್ಲಿಸಲಾಗುತ್ತಿದೆ ಎಂಬ ಅನುಮಾನಗಳೂ ವ್ಯಕ್ತವಾಗಿವೆ ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ದುರುಪಯೋಗ ಅಥವಾ ಅನ್ಯಾಯಕ್ಕೆ ಅವಕಾಶವಾಗದಂತೆ ಜಿಲ್ಲಾಡಳಿತ ಹಾಗೂ ಚುನಾವಣಾ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಮನವಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರುಗಳನ್ನು ತಪ್ಪು ಮಾಹಿತಿ, ಸುಳ್ಳು ಆಕ್ಷೇಪಣೆ ಅಥವಾ ಅನ್ಯಾಯದ ಆಧಾರದ ಮೇಲೆ ಮತದಾರರ ಪಟ್ಟಿಯಿಂದ ಕೈಬಿಡದಂತೆ ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದು ಅವರ ಪ್ರಜಾಪ್ರಭುತ್ವದ ಮೂಲಭೂತ ಹಕ್ಕಿನ ಮೇಲೆ ನೇರ ಪರಿಣಾಮ ಬೀರುವ ಗಂಭೀರ ವಿಷಯವಾಗಿದೆ. ಆದ್ದರಿಂದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ, ನಿಷ್ಪಕ್ಷಪಾತತೆ ಹಾಗೂ ನಿಯಮಾನುಸಾರ ಕ್ರಮಗಳನ್ನು ಖಚಿತಪಡಿಸುವುದು ಅತ್ಯಂತ ಅಗತ್ಯವಾಗಿದೆ.

ಈ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಸ್ವೀಕರಿಸಲಾದ ಫಾರಂ-7 ಅರ್ಜಿಗಳ ಒಟ್ಟು ಸಂಖ್ಯೆ, ಅಂಗೀಕರಿ ಸಲಾದ ಅರ್ಜಿಗಳು ಹಾಗೂ ತಿರಸ್ಕರಿಸಲಾದ ಅರ್ಜಿಗಳ ಸಂಪೂರ್ಣ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ವಿನಂತಿಸುತ್ತೇವೆ. ಅಲ್ಲದೆ, ಯಾವುದೇ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕುವ ಮೊದಲು ಸಂಬಂಧಪಟ್ಟ ಮತದಾರರಿಗೆ ಕಡ್ಡಾಯವಾಗಿ ನೋಟಿಸ್ ನೀಡಿ, ಆಕ್ಷೇಪಣೆ ಸಲ್ಲಿಸಲು ಹಾಗೂ ವಿಚಾರಣೆಯ ಸಂದರ್ಭದಲ್ಲಿ ತಮ್ಮ ವಾದವನ್ನು ಮಂಡಿಸಲು ಸಮರ್ಪಕ ಅವಕಾಶ ಕಲ್ಪಿಸಲಾಗಿದೆಯೇ ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು ಎಂದು ಆಗ್ರಹಿಸಲಾಗಿದೆ.

ಫಾರಂ-7 ಅರ್ಜಿಗಳ ದುರುಪಯೋಗವಾಗದಂತೆ ಹಾಗೂ ಅರ್ಹ ಮತದಾರರ ಹೆಸರುಗಳು ತಪ್ಪಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಅಲ್ಪಸಂಖ್ಯಾತರು, ದಲಿತರು ಹಾಗೂ ಇತರ ದುರ್ಬಲ ವರ್ಗಗಳಿಗೆ ಸೇರಿದ ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಅನ್ಯಾಯದ ಆಧಾರದ ಮೇಲೆ ಕೈಬಿಡದಂತೆ ವಿಶೇಷ ಗಮನ ಹರಿಸಬೇಕು. ಯಾವುದೇ ಸಮುದಾಯದ ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಹಾಗೂ ಚುನಾವಣಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕಾಪಾಡುವುದು ಚುನಾವಣಾ ವ್ಯವಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ.

ಫಾರಂ-7 ಅರ್ಜಿಗಳ ದುರುಪಯೋಗವನ್ನು ತಡೆಯಲು ಹಾಗೂ ಯಾವುದೇ ಅರ್ಹ ಮತದಾರರ ಹೆಸರು ಅನ್ಯಾಯವಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಎಸ್‌ಐಆರ್ ಪ್ರಕ್ರಿಯೆಯನ್ನೇ ಸಂಪೂರ್ಣ ವಾಗಿ ರದ್ದುಗೊಳಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿ ಅರ್ಪಿಸಿದ ನಿಯೋಗದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಮೆಲ್ವಿನ್ ಆರಾನ್ಹಾ ಶಿರ್ವ, ಕಾರ್ಯದರ್ಶಿ ಜುಲಿಯೆಟ್ ಡಿಸೋಜಾ, ಕೋಶಾಧಿಕಾರಿ ಉರ್ಬಾನ್ ಲೂವಿಸ್, ನಿಯೋಜಿತ ಅಧ್ಯಕ್ಷರಾದ ಲೂವಿಸ್ ಡಿಸೋಜಾ, ಉಡುಪಿ ವಲಯ ಅಧ್ಯಕ್ಷ ಕಿರಣ್ ಲೂವಿಸ್, ಮಾಜಿ ಅಧ್ಯಕ್ಷರಾದ ಅಲ್ಫೋನ್ಸ್ ಡಿಕೋಸ್ತಾ, ವಲೇರಿಯನ್ ಫೆರ್ನಾಂಡಿಸ್, ಮೇರಿ ಡಿಸೋಜಾ, ಸಮುದಾಯದ ಮುಖಂಡರಾದ ವೆರೋನಿಕಾ ಕರ್ನೆಲಿಯೋ, ರೋಶನಿ ಒಲಿವರ್ ಮತ್ತಿರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X