ದ್ವಿತೀಯ ಪಿಯುಸಿ ಪರೀಕ್ಷೆ: 8 ಮಂದಿ ಗೈರು

ಉಡುಪಿ, ಮಾ.12: ಜಿಲ್ಲೆಯ 28 ಪರೀಕ್ಷಾ ಕೇಂದ್ರಗಳಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿಯ ರಸಾಯನ ಶಾಸ್ತ್ರ, ಸೈಕಾಲಜಿ ಹಾಗೂ ಬೇಸಿಕ್ ಮ್ಯಾಥ್ಸ್ ಪರೀಕ್ಷೆಗಳಿಗೆ ಒಟ್ಟು 8 ಮಂದಿ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. 7865 ಮಂದಿ ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡಿದ್ದು ಇವರಲ್ಲಿ 7857 ಮಂದಿ ಹಾಜರಾಗಿದ್ದರು ಎಂದು ಡಿಡಿಪಿಯು ಮಾರುತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story