ಉಡುಪಿ: ಮೇ 9ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ, ಮೇ 6: ಉಡುಪಿ ನಗರಸಭಾ ಅಧೀನದ ಬಜೆ ಶುದ್ಧೀಕರಣ ಘಟಕದಲ್ಲಿರುವ ಕ್ಲೀಯರ್ ವಾಟರ್ ಸಂಪ್ ಅನ್ನು ಸ್ವಚ್ಛಗೊಳಿಸುವ ಕಾಮಗಾರಿಯನ್ನು ಮೇ 9ರಂದು ಹಮ್ಮಿಕೊಳ್ಳಲಾಗಿದ್ದು, ಹೀಗಾಗಿ ಬಜೆ ಯಿಂದ ಉಡುಪಿ ನಗರಕ್ಕೆ ನೀರು ಸರಬರಾಜನ್ನು ಸ್ಥಗಿತಗೊಳಿಸಬೇಕಾಗಿದೆ.
ಈ ಹಿನ್ನೆಲೆಯಲ್ಲಿ ಮೇ 9ರಂದು ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರು ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.
Next Story





