ಮೇ 9ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಿಶೇಷ ಸಭೆ

ಉಡುಪಿ, ಮೇ 7: ಕರ್ನಾಟಕ ಪ್ರದೇಶ ಕಾಂಗ್ರೆಸ್ ಆದೇಶದ ಪ್ರಕಾರ ಉಡುಪಿ ಜಿಲ್ಲಾ ಕಾಂಗ್ರೆಸ್‌ನ ವಿಶೇಷ ಸಭೆಯನ್ನು ಮೇ 9ರಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದೆ
ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ, ಮೈಸೂರು ವಲಯದ ಉಸ್ತುವಾರಿ ರೋಜಿಜಾನ್ ಉಪಸ್ಥಿತಿಯೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಪ್ರದೇಶ ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ ವಿನಯ ಕುಮಾರ್ ಸೊರಕೆ, ಪ್ರಮುಖರಾದ ಐವನ್ ಡಿಸೋಜ, ಎಂ.ಎ.ಗಫೂರ್, ಕೆ.ಪ್ರತಾಪ ಚಂದ್ರ ಶೆಟ್ಟಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಎಂ ಸುಕುಮಾರ್ ಶೆಟ್ಟಿ, ಕಾರ್ಯಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮೊದಲಾದವರು ಭಾಗವಹಿಸಲಿರುವರು ಎಂದು ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





