ಡಿ. 9 - 10ರಂದು ವಾದಿರಾಜ ಕನಕದಾಸ ಸಂಗೀತೋತ್ಸವ

ಉಡುಪಿ, ಡಿ.8: 45ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮ ಡಿ.9 ಮತ್ತು 10ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ), ಎಂ.ಜಿ.ಎಂ ಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ ಪರ್ಕಳ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗುತ್ತಿದೆ.
ಡಿ.9 ಶನಿವಾರ ಸಂಜೆ 4:00 ಗಂಟೆಗೆ ಶಿವಮೊಗ್ಗ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಡಾ.ಶುಭಾ ಮರವಂತೆ ಸಂಗೀತೋತ್ಸವವನ್ನು ಉದ್ಘಾಟಿಸಲಿದ್ದಾರೆ. ಎಂಜಿಎಂ ಕಾಲೇಜಿನ ಪ್ರಾಂಶುಪಾಲ್ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಲಿರು ವರು. ಬಳಿಕ 5:00ರಿಂದ ಹರಿಹರನ್ ಎಂ.ಬಿ ಹಾಗೂ ಅಶೋಕ್ ಎಸ್. ಮತ್ತು ಬಳಗದಿಂದ ಸಂಗೀತ ಕಚೇರಿ ನಡೆಯಲಿದೆ.
ಡಿ.10ರ ರವಿವಾರ ಬೆಳಗ್ಗೆ 9:00ರಿಂದ ಕೆ.ಆರ್.ರಾಘವೇಂದ್ರ ಆಚಾರ್ಯ ಹಾಗೂ ಶ್ರುತಿ ಗುರುಪ್ರಸಾದ್ ಬಳಗದಿಂದ ಹಾಡುಗಾರಿಕೆ, 11:15ರಿಂದ ವಿದ್ವಾನ್ ಮಹಾಬಲೇಶ್ವರ ಭಾಗವತ್ ಮತ್ತು ಬಳಗದಿಂದ ಹಿಂದೂಸ್ಥಾನಿ ಗಾಯನ, ಅಪರಾಹ್ನ 2:00ರಿಂದ ಸಂಗೀತ ಸ್ಪರ್ಧಾ ವಿಜೇತರಿಂದ ಕೀರ್ತನೆಗಳ ಗಾಯನ ನಡೆಯಲಿದೆ.
ಸಂಜೆ 4:00 ಗಂಟೆಗೆ ಸಮಾರೋಪ ಸಮಾರಂಭ ಮತ್ತು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಸಮಾರೋಪ ಸಮಾರಂಭ ಅಧ್ಯಕ್ಷತೆಯನ್ನು ಹಿರಿಯ ಯಕ್ಷಗಾನ ಕಲಾವಿದ ಪ್ರೊ.ಎಂ.ಎಲ್. ಸಾಮಗ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತಿರುವರು. 4:30ರಿಂದ ಕಾರ್ಕಳದ ಆತ್ರೇಯಿ ಕೃಷ್ಣಾ ಬಳಗದಿಂದ ಶಾಸ್ತ್ರೀಯ ಹಾಡುಗಾರಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.







