ಉಡುಪಿ: ಅ.9 ರಂದು ಡಾ.ಶಿವರಾಮ ಕಾರಂತರ 124ನೇ ಜನ್ಮದಿನಾಚರಣೆ

ಉಡುಪಿ, ಅ.7: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಕಾರಂತರ 124ನೇ ಜನ್ಮದಿನಾಚರಣೆ ಮತ್ತು ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ಸಮಾರಂಭ ಅ.9 ರಂದು ಬೆಳಿಗ್ಗೆ 11:30ಕ್ಕೆ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಖ್ಯಾತ ಜಾನಪದ ವಿದ್ವಾಂಸ ಮತ್ತು ಚಿಂತಕ ಡಾ.ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಲಿದ್ದು, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಚಿಂತಕ ಸಂಕಯ್ಯ ಶೆಟ್ಟಿ ಅವರು ಕಾರಂತರೊಂದಿಗಿನ ಅನುಭವದ ನುಡಿಗಳಾನ್ನಾಡಲಿದ್ದಾರೆ. ಕರಾವಳಿ ರಂಗಾಯಣದ ನಿರ್ದೇಶಕ ಬಿ.ಆರ್.ವೆಂಕಟರಮಣ ಐತಾಳ, ಸಹಾಯಕ ಪ್ರಾಧ್ಯಾಪಕಿ ಮತ್ತು ಸಂಯೋಜಕಿ ರೇಡಿಯೋ ಮಣಿಪಾಲದ ಡಾ.ರಶ್ಮಿ ಅಮ್ಮೆಂಬಳ ಭಾಗವಹಿಸಲಿದ್ದಾರೆ ಎಂದು ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಡಾ.ಶಿವರಾಮ ಕಾರಂತ ಜನ್ಮ ದಿನೋತ್ಸವದ ಪ್ರಯುಕ್ತ ಪದವಿ ವಿದ್ಯಾರ್ಥಿಗಳಿಗೆ ಕಾರಂತರ ಬದುಕು- ಬರಹಗಳ ಕುರಿತು ರಸಪ್ರಶ್ನೆ ಸ್ಪರ್ಧೆಯನ್ನು ಅ.9ರಂದು ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿ ಆಯೋಜಿಸಲಾಗಿದೆ.
ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪದವಿ ಕಾಲೇಜುಗಳಸ ವಿದ್ಯಾರ್ಥಿಗಳು ಭಾಗವಹಿಸಬಹುದು. ಪ್ರತಿ ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳ ಒಂದು ತಂಡ ಭಾಗವಹಿಸಬಹುದು. ಪ್ರಶ್ನೆಗಳು ಕಾರಂತರ ಬದುಕು- ಬರಹದ ಕುರಿತಾಗಿರು ತ್ತದೆ. ವಿಜೇತರಿಗೆ ನಗದು ರೂಪದ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ವಿವಿಧ ಸ್ಪರ್ಧೆಗಳ ಉದ್ಘಾಟನೆ: ಡಾ. ಶಿವರಾಮ ಕಾರಂತ ಟ್ರಸ್ಟ್ ವತಿ ಯಿಂದ ಡಾ. ಶಿವರಾಮ ಕಾರಂತರ ಜನ್ಮ ದಿನದ ಅಂಗವಾಗಿ ಬ್ರಹ್ಮಗಿರಿಯ ರೆಡ್‌ಕ್ರಾಸ್ ಭವನದಲ್ಲಿನಡೆದ ವಿವಿಧ ಸ್ಪರ್ಧೆಗಳನ್ನು ಕುಂದಾಪುರದ ಎಚ್.ಎಂ.ಎಂ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ವಹಿಸಿ ದ್ದರು. ಖ್ಯಾತ ರಂಗವಲ್ಲಿ ತಜ್ಞೆ ಡಾ. ಭಾರತಿ ಮರವಂತೆ, ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯರಾದ ಡಾ.ಚೇತನ್ ಶೆಟ್ಟಿ ಕೋವಾಡಿ, ಸತೀಶ್ ಕೊಡವೂರು ಉಪಸ್ಥಿತರಿದ್ದರು.
ಕಾರಂತ ಬಾಲ ಪ್ರಪಂಚ ಹಾಗೂ ಜ್ಞಾನ ಪ್ರಪಂಚ ಕೃತಿಯ ಚಿತ್ರಗಳ ಆಧಾರದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಗಳಿಗೆ ಚಿತ್ರಕಲಾ ಸ್ಪರ್ಧೆ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಂಗೋಲಿ ಬಿಡಿಸುವ ಸ್ಪರ್ಧೆ ನಡೆದವು.






