Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಲ್ಲೂರು, ಸಾಂತೂರಿನ 942 ಎಕ್ರೆಯಲ್ಲಿ...

ಎಲ್ಲೂರು, ಸಾಂತೂರಿನ 942 ಎಕ್ರೆಯಲ್ಲಿ ಹೊಸ ಕೈಗಾರಿಕಾ ಪ್ರದೇಶ: ಉಡುಪಿ ಡಿಸಿ ಸ್ವರೂಪ ಟಿ.ಕೆ

ವಾರ್ತಾಭಾರತಿವಾರ್ತಾಭಾರತಿ29 Sept 2025 8:16 PM IST
share
ಎಲ್ಲೂರು, ಸಾಂತೂರಿನ 942 ಎಕ್ರೆಯಲ್ಲಿ ಹೊಸ ಕೈಗಾರಿಕಾ ಪ್ರದೇಶ: ಉಡುಪಿ ಡಿಸಿ ಸ್ವರೂಪ ಟಿ.ಕೆ

ಉಡುಪಿ, ಸೆ.29: ಕಾಪು ತಾಲೂಕು ಪಡುಬಿದ್ರಿ ಬಳಿಯ ಎಲ್ಲೂರು ಹಾಗೂ ಸಾಂತೂರುಗಳ ಸುಮಾರು 941.98 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕೆ ಪ್ರದೇಶಗಳ ವಿಸ್ತರಣಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ.ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಇದೇ ವೇಳೆ ಹೊಸದಾಗಿ ಕೈಗಾರಿಕಾ ಪ್ರದೇಶ ನಿರ್ಮಾಣಗೊಳ್ಳುವ ಹೆಬ್ರಿ ತಾಲೂಕು ಶಿವಪುರದಲ್ಲಿ 74.84 ಎಕರೆ, ಕೆರೆಬೆಟ್ಟುನಲ್ಲಿ 38.75 ಎಕರೆ, ನಿಟ್ಟೆಯಲ್ಲಿ 50.42 ಎಕರೆ ಸೇರಿದಂತೆ ಒಟ್ಟು 165.98 ಎಕರೆ ಜಮೀನಿನ ಗಡಿ ಗುರುತಿಸುವ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದು ಅವರು ಕೆಐಎಡಿಬಿ ಅಭಿಯಂತರರಿಗೆ ಸೂಚನೆಗಳನ್ನು ನೀಡಿದರು.

ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಕೈಗಾರಿಕೋದ್ಯಮಿ ಗಳು ಘಟಕಗಳನ್ನು ಕೂಡಲೇ ಸ್ಥಾಪಿಸಬೇಕು.ಅವರಿಗೆ ಹೆಚ್ಚುವರಿ ಕಾಲಾವಕಾಶ ವನ್ನು ಕಲ್ಪಿಸಲಾಗುವುದಿಲ್ಲ. ಘಟಕ ಪ್ರಾರಂಭಿಸಲಿದ್ದರೆ ನಿವೇಶನ ವನ್ನು ಮರುಹಂಚಿಕೆ ಮಾಡಲಾಗುವುದು ಎಂದು ಸ್ವರೂಪ ಟಿ.ಕೆ ತಿಳಿಸಿದರು.

ಘಟಕ ಸ್ಥಾಪಿಸಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ನಿವೇಶನವನ್ನು ನೀಡಿದ್ದರೂ ಸಹ ಕೈಗಾರಿಕಾ ಯೋಜನೆಗಳ ಅನುಷ್ಠಾನವನ್ನು ಕಾಲಮಿತಿ ಯೊಳಗೆ ಅನೇಕರು ಪ್ರಾರಂಭಿಸುತ್ತಿಲ್ಲ. ಘಟಕಗಳ ಸ್ಥಾಪನೆಗೆ ಸಮರ್ಪಕ ಕಾರಣಗಳು ಕಂಡುಬರದೇ ಇದ್ದಲ್ಲಿ ಅಂತಹ ನಿವೇಶನಗಳನ್ನು ಕೈಗಾರಿಕೆ ಪ್ರಾರಂಭಿಸಲು ನಿವೇಶನ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿರುವ ಇತರರಿಗೆ ಮರು ಹಂಚಿಕೆ ಮಾಡಲು ಕ್ರಮ ವಹಿಸಬೇಕೆಂದು ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಭೂಮಿಯ ಭೂಸ್ವಾಧೀನ ಪ್ರಕ್ರಿಯೆ ಆದ್ಯತೆಯ ಮೇಲೆ ಕೈಗೊಂಡು ರಸ್ತೆ ಕಾಮಗಾರಿಯನ್ನು ಅಭಿವೃದ್ಧಿಪಡಿಸಬೇಕು ಎಂದ ಜಿಲ್ಲಾಧಿಕಾರಿಗಳು, ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆಯ ಕೈಗಾರಿಕಾ ಪ್ರದೇಶದ ನಿವೇಶನಗಳ ನಮೂನೆ 9/11 ದಾಖಲೆಗಳನ್ನು ಈಗಾಗಲೇ 16 ಘಟಕಗಳಿಗೆ ನೀಡಿದ್ದು, ಬಾಕಿ ಉಳಿದ 8 ಘಟಕಗಳಿಗೆ ಕೂಡಲೇ ಅವುಗಳನ್ನು ಮಾಡಿಕೊಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಕೈಗಾರಿಕಾ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿಗೆ ಅಳವಡಿಸಿರುವ 100 ಕೆ.ವಿ. ವಿದ್ಯುತ್ ಪರಿವರ್ತಕವನ್ನು 250 ಕೆ.ವಿ.ಗೆ ಹೆಚ್ಚಿಸುವ ಟ್ರಾನ್ಸ್‌ಫಾರ್ಮ್ ಅಳವಡಿಸುವ ಕಾರ್ಯವನ್ನು ಮುಂದಿನ ಒಂದು ವಾರದ ಒಳಗೆ ಕೈಗೊಳ್ಳಬೇಕೆಂದು ಮೆಸ್ಕಾಂ ಇಲಾಖೆಯ ಅಭಿಯಂತರರಿಗೆ ಅವರು ಸೂಚಿಸಿದರು.

ವಿಶ್ವಕರ್ಮ ಯೋಜನೆ: ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಪಿ.ಎಂ ವಿಶ್ವಕರ್ಮ ಯೋಜನೆಯ 6,274 ಫಲಾನುಭವಿ ಗಳಿಗೆ ಈಗಾಗಲೇ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗಿದೆ. 3,916 ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲು ಸಾಲ ಸೌಲಭ್ಯ ಮಂಜೂರಾಗಿದ್ದು, 3,573 ಫಲಾನುಭವಿಗಳ ಖಾತೆಗೆ ಆರ್ಥಿಕ ಸಹಾಯಧನವನ್ನು ಪಾವತಿಸಲಾಗಿದೆ ಎಂದು ವಿವರಿಸಿದ ಡಿಸಿ, ಈ ಯೋಜನೆಯಡಿ ಆಯ್ಕೆಯಾದವರಿಗೆ ಕೌಶಲ್ಯ ತರಬೇತಿಗಳನ್ನು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನೀಡುವ ಜೊತೆಗೆ ಬ್ಯಾಂಕ್‌ಗಳು ಆರ್ಥಿಕ ಸೌಲಭ್ಯವನ್ನು ಸಹ ಒದಗಿಸಬೇಕು ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಆಯುಕ್ತ ಮಂಹಾತೇಶ ಹಂಗರಗಿ, ಖಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

‘ಜಿಲ್ಲೆಯಲ್ಲಿ ರಫ್ತು ಉದ್ಯಮವನ್ನು ಉತ್ತೇಜಿಸಲು ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ರಫ್ತನ್ನು ಹೆಚ್ಚಿಸಲು ಸಹ ಕ್ರಮಕೈಗೊಳ್ಳಬೇಕು. ಮರೈನ್ ಪ್ರೊಡಕ್ಟ್ (ಸಮುದ್ರ ಉತ್ಪನ್ನ) ಗಳ ರಫ್ತಿಗೆ ಇರುವ ಸಮಸ್ಯೆಗಳನ್ನು ಪರಿಹರಿಸಲು ಸೆಂಟ್ರಲೈಸ್ಡ್ ಸೀ ಫುಡ್ ಪಾರ್ಕ್‌ಗಳ ನಿರ್ಮಾಣ ಹಾಗೂ ಎಕ್ಸ್‌ಪೋರ್ಟ್ ಇನ್ಸ್‌ಪೆಕ್ಷನ್ ಏಜೆನ್ಸಿಗಳನ್ನು ಹೆಚ್ಚುವರಿಯಾಗಿ ನೇಮಿಸಲು ಕ್ರಮವಹಿಸಬೇಕು.’

-ಸ್ವರೂಪ ಟಿ.ಕೆ., ಜಿಲ್ಲಾಧಿಕಾರಿ







share
ವಾರ್ತಾಭಾರತಿ
ವಾರ್ತಾಭಾರತಿ
Next Story
X