Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗಂಗೊಳ್ಳಿ: ಯಕ್ಷಗಾನ ಕಲಾರಂಗದ 98ನೇ ಮನೆ...

ಗಂಗೊಳ್ಳಿ: ಯಕ್ಷಗಾನ ಕಲಾರಂಗದ 98ನೇ ಮನೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ13 Jun 2026 9:40 PM IST
share
ಗಂಗೊಳ್ಳಿ: ಯಕ್ಷಗಾನ ಕಲಾರಂಗದ 98ನೇ ಮನೆ ಹಸ್ತಾಂತರ

ಉಡುಪಿ, ಜೂ.13: ಯಕ್ಷಗಾನ ಕಲಾರಂಗ ವಿದ್ಯಾಪೋಷಕ್‌ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮನೀಷಾ ಖಾರ್ವಿ ಇವರ ಬಡ ಕುಟುಂಬಕ್ಕೆ ಮುಂಬಯಿಯ ಉದ್ಯಮಿ, ದಾನಿ ಆರ್.ಸುಂದರ ರಾವ್ ತನ್ನ ತಂದೆ-ತಾಯಿಯರ ನೆನಪಿ ನಲ್ಲಿ ಗಂಗೊಳ್ಳಿಯಲ್ಲಿ ನಿರ್ಮಿಸಿಕೊಟ್ಟ ನೂತನ ಮನೆ ‘ಶ್ರೀರಾಘವೇಂದ್ರ ನಿಲಯ’ವನ್ನು ಶುಕ್ರವಾರ ಹಸ್ತಾಂತರಿಸಲಾಯಿತು.

ಗಂಗೊಳ್ಳಿಯ ಮಂಜುನಾಥ ಖಾರ್ವಿ ಹಾಗೂ ಅನಿತಾ ದಂಪತಿ ಪುತ್ರಿ ಮನೀಷಾ ಅವರು ಎಸೆಸೆಲ್ಸಿಯಲ್ಲಿ ಶೇ.95 ಹಾಗೂ ಪ್ರಥಮ ಪಿಯುಸಿಯಲ್ಲಿ ಶೇ.97 ಅಂಕ ಗಳಿಸಿದ್ದಾಳೆ. ಮುಂಬಯಿಯ ಆರ್.ಸುಂದರ ರಾವ್ ಹಾಗೂ ಸೊಸೆ ಪ್ರೇಮಾ ಅವರ ಪ್ರಾಯೋಜಕತ್ವದಲ್ಲಿ ತನ್ನ ಮಾತಾ-ಪಿತೃಗಳಾದ ರಾಘವೇಂದ್ರ ರಾವ್ ಹಾಗೂ ಜಲಜಾಕ್ಷಿ ಸ್ಮರಣೆಯಲ್ಲಿ ಮನೆಯನ್ನು ನಿರ್ಮಿಸಿಕೊಟ್ಟಿದ್ದು, ಇದರ ಉದ್ಘಾಟನೆ ಇಲ್ಲಿ ನಡೆಯಿತು.

ಮನೆಯನ್ನು ಉದ್ಘಾಟಿಸಿದ ಸುಂದರ ರಾವ್ ಮಾತನಾಡಿ, ನನ್ನ ತಂದೆ ಕಡು ಬಡತನದಲ್ಲಿ ಮುಂಬೈಗೆ ಹೋಗಿ ಹೋಟೆಲ್ ಆರಂಭಿಸಿದ್ದನ್ನು ಸ್ಮರಿಸಿಕೊಂಡರು. ಪರೋಪಕಾರಿಯಾಗಿದ್ದ ಅವರ ಸ್ಮರಣೆಯಲ್ಲಿ ಬಡವರಿಗೆ ಸಹಾಯ ಮಾಡಬೇಕೆಂಬ ಅಪೇಕ್ಷೆಯಂತೆ ಈ ಕಾರ್ಯಕ್ಕೆ ಮುಂದಾಗಿದ್ದೇವೆ. ವಿದ್ಯಾಪೋಷಕ್ ಬಡ ವಿದ್ಯಾರ್ಥಿಗಳಿಗೆ ಮನೆ ಕಟ್ಟಿಸಿ ಕೊಡುವ ವಿಷಯ ತಿಳಿದಿದ್ದು, ನಮ್ಮ ಸಹಾಯ ಸತ್ಪಾತ್ರಕ್ಕೆ ಸಂದಾಯವಾದುದಕ್ಕೆ ಸಂತೋಷಗೊಂಡಿದ್ದೇವೆ ಎಂದರು.

ಕೊಲೆಕಾಡಿಯ ವೇದಮೂರ್ತಿ ವಾದಿರಾಜ ಉಪಾಧ್ಯಾಯ ಶುಭಾಶಂಸನೆ ಮಾಡಿದರು. ಪೇಜಾವರ ಮಠದ ದಿವಾನರಾದ ರಘುರಾಮ ಆಚಾರ್ಯರು ದಿನದ ಇಪ್ಪತ್ನಾಲ್ಕು ಗಂಟೆಯೂ ಕಲೆ, ಸಮಾಜ, ಶಿಕ್ಷಣಕ್ಕಾಗಿ ಯೋಚಿ ಸುತ್ತಾ ಕೆಲಸ ಮಾಡುವ ಇಂತಹ ಇನ್ನೊಂದು ಸಂಸ್ಥೆಯನ್ನು ನಾನು ಕಂಡಿಲ್ಲ ಎಂದು ಯಕ್ಷಗಾನ ಕಲಾರಂಗವನ್ನು ಹೊಗಳಿದರು.

ಕುಂದಾಪುರದ ಉದ್ಯಮಿ ಸೀತಾರಾಮ ನಕ್ಕತ್ತಾಯ, ಸುಂದರರಾಯರ ಬಂಧುಗಳಾದ ಸುಶೀಲ ಮುಗೆರಾಯ, ಎಚ್.ವಿ.ರಮಾದೇವಿ, ಗೀತಾ ಆರ್. ಆಚಾರ್ಯ ಹಾಗೂ ಪಂಚಾಯತ್ ಅಧ್ಯಕ್ಷೆ ಜಯಂತಿ ಮೇಡಮ್ ಉಪಸ್ಥಿತರಿದ್ದರು.

ಪೇಜಾವರ ಮಠದ ವಿಷ್ಣುಮೂರ್ತಿ ಆಚಾರ್ಯ, ಸ್ನೇಹಾ ವಿ. ಆಚಾರ್ಯ, ಸಂಸ್ಥೆಯ ಉಪಾಧ್ಯಕ್ಷ ಪಿ. ಕಿಶನ್ ಹೆಗ್ಡೆ, ಕೋಶಾಧಿಕಾರಿ ಕೆ. ಸದಾಶಿವ ರಾವ್, ಸದಸ್ಯರಾದ ಯು.ವಿಶ್ವನಾಥ ಶೆಣೈ, ಯು.ಎಸ್. ರಾಜಗೋಪಾಲ ಆಚಾರ್ಯ, ವಿಜಯ ಕುಮಾರ್ ಮುದ್ರಾಡಿ, ಭುವನಪ್ರಸಾದ್ ಹೆಗ್ಡೆ, ಹಿರಿಯಣ್ಣ ಕಿದಿಯೂರ್, ಸುಜಯೇಂದ್ರ ಹಂದೆ, ಜಯರಾಮ ಪಡಿಯಾರ್, ವಿದ್ಯಾಪೋಷಕ್‌ನ ಫಲಾನುಭವಿಗಳಾದ ಡಾ. ದೀಪಿಕಾ ಶಾನುಭಾಗ್, ನಿಶಾ, ಶ್ರಾವ್ಯ, ನಿಸರ್ಗ ಭಾಗವಹಿಸಿದ್ದರು.

ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವನೆಯ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X