ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ಕುಟುಂಬ ಭೇಟಿ

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ದಂಪತಿ, ಪುತ್ರ, ಕುಟುಂಬಿಕರ ಸಹಿತ ರವಿವಾರ ರಾತ್ರಿ ಭೇಟಿ ನೀಡಿದರು.
ಸೋಮವಾರ ಮುಂಜಾನೆಯಿಂದ ದೇವಸ್ಥಾನದಲ್ಲಿ ಅವರು ಕುಟುಂಬಿಕರ ಜೊತೆ ವಿಶೇಷ ಸೇವೆ ಸಲ್ಲಿಸಲಿದ್ದಾರೆ. ಕೇಂದ್ರ ಮಂತ್ರಿ ಎಚ್.ಡಿ.ಕೆ. ಅವರ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತವರ ಪತ್ನಿ ಕುಟುಂಬಿಕರು ಜೊತೆಗಿದ್ದಾರೆ.
ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಜೆಡಿಎಸ್ ಮುಖಂಡರಾದ ಸಬ್ಲಾಡಿ ಮಂಜಯ್ಯ ಶೆಟ್ಟಿ, ಯೋಗೀಶ್ ಶೆಟ್ಟಿ, ಮನ್ಸೂರ್ ಇಬ್ರಾಹಿಂ ಮರವಂತೆ, ಹುಸೇನ್ ಹೈಕಾಡಿ, ಸಂದೇಶ್ ಭಟ್ ಮೊದಲಾದವರಿದ್ದರು.
Next Story






