Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ನ.1ಕ್ಕೆ ಭುಜಂಗ ಪಾರ್ಕ್‌ನಲ್ಲಿ ಹಲ್ಮಿಡಿ...

ನ.1ಕ್ಕೆ ಭುಜಂಗ ಪಾರ್ಕ್‌ನಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಸ್ಥಾಪನೆ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ16 Oct 2024 7:42 PM IST
share
ನ.1ಕ್ಕೆ ಭುಜಂಗ ಪಾರ್ಕ್‌ನಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಸ್ಥಾಪನೆ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಅ.16: ರಾಜ್ಯ ಸರಕಾರದ ಸೂಚನೆಯಂತೆ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ ಒಂದರಂದು ನಗರದ ಅಜ್ಜರಕಾಡಿನಲ್ಲಿರುವ ಭುಜಂಗ ಪಾರ್ಕ್‌ನಲ್ಲಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ ತಯಾರಿಸಲಾದ ಕನ್ನಡ ಲಿಪಿಯಲ್ಲಿ ರಾಜ್ಯದಲ್ಲಿ ದೊರೆತ ಮೊಟ್ಟಮೊದಲ ಶಿಲಾ ಶಾಸನ ಎಂದು ಪರಿಗಣಿಸಲ್ಪಟ್ಟ ‘ಹಲ್ಮಿಡಿ ಶಾಸನ’ದ ಪ್ರತಿಕೃತಿಯನ್ನು ಪ್ರತಿಷ್ಠಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ತಿಳಿಸಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಕರ್ನಾಟಕ ಸಂಭ್ರಮ 50ರ ಸಂದರ್ಭದಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವೈಭವ ಯುತವಾಗಿ ಆಚರಿಸಲು ಬೇಕಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 1ರಂದು ನಗರದ ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶವನ್ನು ನೀಡಲಿದ್ದಾರೆ ಎಂದರು.

ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹರಕ್ಷಕ, ಎನ್ನೆಸ್ಸೆಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲಿದ್ದಾರೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಗಣ್ಯರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದವರು ತಿಳಿಸಿದರು.

ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರು, ಸ್ವಾತಂತ್ರ ಹೋರಾಟಗಾರರು, ರಾಷ್ಟ್ರೀಯ ಹಾಗೂ ಅಂತರ್‌ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಶಿಷ್ಠಾಚಾರ ದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಆಹ್ವಾನಿಸುವಂತೆ ಸೂಚಿಸಿದ ಡಿಸಿ, ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ-ಸಂಸ್ಥೆಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದರು. ಇದರೊಂದಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು.

ನ.1ರಂದು ಬೆಳಗ್ಗೆ 8 ಗಂಟೆಗೆ ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣ ದವರೆಗೆ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ಸರಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಸಾಗಿಬರಲಿವೆ ಎಂದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು. ಕಾರ್ಯಕ್ರಮದ ಯಶಸ್ಸಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸುವಂತೆ ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಎಎಸ್‌ಪಿ ಕೆ.ಎಸ್.ಹೆಗ್ಡೆ, ನಗರಸಭೆ ಪೌರಾಯುಕ್ತ ರಾಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾ ಯಕ ನಿರ್ದೇಶಕಿ ಪೂರ್ಣಿಮಾ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ಡಿಡಿಪಿಐ ಗಣಪತಿ ಕೆ, ಡಿಡಿಪಿಯು ಮಾರುತಿ ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿ ಗಳು ಉಪಸ್ಥಿತರಿದ್ದರು.



ಹಲ್ಮಿಡಿ ಶಾಸನ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲ್ಮಿಡಿಯಲ್ಲಿ 1936ರಲ್ಲಿ ಪತ್ತೆಯಾದ ಶಾಸನವನ್ನು ಕನ್ನಡ ಲಿಪಿಯಲ್ಲಿ ಲಭ್ಯವಾದ ಮೊಟ್ಟ ಮೊದಲ ಶಾಸನವೆಂದು ಪರಿಗಣಿತವಾಗಿತ್ತು. ಮೈಸೂರಿನ ಡಾ.ಎಂ.ಎಚ್.ಕೃಷ್ಣ ಎಂಬವರು ಇದನ್ನು ಸಂಶೋಧಿಸಿದ್ದರು. ತಾಳೆಗುಂದದ ಶಾಸನವನ್ನು ಕನ್ನಡದ ಮೊತ್ತಮೊದಲ ಶಾಸನವೆಂದು ಭಾರತೀಯ ಸರ್ವೇಕ್ಷಣಾ ಇಲಾಖೆ ಘೋಷಿಸುವರೆಗೆ ಇದು ಕನ್ನಡದ ಮೊತ್ತ ಮೊದಲ ಶಾಸನವೆನಿಸಿತು.

ಹಳೆಗನ್ನಡ ಹಾಗೂ ಬ್ರಾಹ್ಮೀ ಲಿಪಿಗಳನ್ನು ಹೋಲುವ ಕನ್ನಡ ಲಿಪಿಯಲ್ಲಿರುವ ಈ ಶಾಸನವನ್ನು ಕದಂಬ ವಂಶದ ಕಾಕುಸ್ಥವರ್ಮ ಬರೆಸಿದ್ದ ಎಂದು ಹೇಳಲಾಗಿದೆ. 16 ಸಾಲುಗಳನ್ನು ಹೊಂದಿರುವ ಇದು ದತ್ತಿ ಶಾಸನವಾಗಿದೆ. ಯುದ್ಧದಲ್ಲಿ ಹೋರಾಡಿ ಗೆದ್ದ ವಿಜಯರಸ ಎಂಬ ಸೈನಿಕನಿಗೆ ಎರಡು ಗ್ರಾಮಗಳನ್ನು ದತ್ತಿಯಾಗಿ ನೀಡಿದ ರಾಜಾಜ್ಞೆಯನ್ನು ಶಾಸನ ನಿರೂಪಿಸುತ್ತದೆ. ಇದರ ಕಾಲಮಾನ ಕ್ರಿ.ಶ.450ರ ಸುಮಾರಿಗೆ ಎಂದು ಅಂದಾಜಿಸಲಾಗಿದೆ.

ಸದ್ಯ ಮೂಲ ಶಾಸನ ರಾಜ್ಯ ಪುರಾತತ್ವ ಇಲಾಖೆಯ ಮ್ಯೂಸಿಯಂನಲ್ಲಿದ್ದು, ಇದರ ಫೈಬರ್‌ಗ್ಲಾಸ್ ಪ್ರತಿಕೃತಿಯನ್ನು, ಶಾಸನ ದೊರೆತ ಹಲ್ಮಿಡಿಯಲ್ಲಿ ಸ್ಥಾಪಿಸಲಾಗಿದೆ.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X