Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಫೆ.1: ಪಣಿಯಾಡಿ ದೇವಸ್ಥಾನಕ್ಕೆ ನೂತನ ರಥ...

ಫೆ.1: ಪಣಿಯಾಡಿ ದೇವಸ್ಥಾನಕ್ಕೆ ನೂತನ ರಥ ಸಮರ್ಪಣೆ

ವಾರ್ತಾಭಾರತಿವಾರ್ತಾಭಾರತಿ30 Jan 2025 9:51 PM IST
share

ಉಡುಪಿ, ಜ.30: ಪರ್ಯಾಯ ಪುತ್ತಿಗೆ ಮಠದ ಅಧೀನದಲ್ಲಿರುವ ಪಣಿಯಾಡಿಯ ಶ್ರೀಅನಂತಾಸನ ಶ್ರೀಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನಕ್ಕೆ ನೂತನ ರಥ ಸಮರ್ಪಣೆ ಸಮಾರಂಭ ಫೆ.1ರಂದು ನಡೆಯಲಿದೆ ಎಂದು ಪುತ್ತಿಗೆ ಶಾಖಾ ಮಠಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ತಿಳಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ವಿವರಗಳನ್ನು ನೀಡಿದ ಅವರು, ಫೆ.1ರಂದು ಸಂಜೆ 4ಗಂಟೆಗೆ ಶ್ರೀಕೃಷ್ಣ ಮಠದಿಂದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನಕ್ಕೆ ಶೋಭಾಯಾತ್ರೆ ನಡೆಯಲಿದ್ದು ಪರ್ಯಾಯ ಪುತ್ತಿಗೆ ಶ್ರೀಸುಗುಣೇಂದ್ರತೀರ್ಥರು ಹಾಗೂ ಶ್ರೀಸುಶ್ರೀಂದ್ರತೀರ್ಥರು ಶ್ರೀಕೃಷ್ಣಮಠದ ಬಳಿ ಅದಕ್ಕೆ ಚಾಲನೆ ನೀಡುವರು ಎಂದರು.

ಕಲ್ಸಂಕ, ಕಡಿಯಾಳಿ, ಕುಂಜಿಬೆಟ್ಟು ಮಾರ್ಗವಾಗಿ ಮೆರವಣಿಗೆಯು ಸುಡುಮದ್ದು, ಬಿರುದಾವಳಿ, ವೇಧಘೋಷ, ತಟ್ಟಿರಾಯ, ಭಜನೆ, ಹುಲಿವೇಷ, ಪೌರಾಣಿಕ ವೇಷ, ಬಣ್ಣದ ಕೊಡೆಗಳು, ಕುಣಿತ ಭಜನೆಯೊಂದಿಗೆ ಸಾಗಲಿದೆ. ಪಣಿಯಾಡಿ ದೇವಳ ಆವರಣದಲ್ಲಿ ಸಂಜೆ 6 ಗಂಟೆಗೆ ಸಭಾ ಕಾರ್ಯಕ್ರಮವು ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥರ ಅಧ್ಯಕ್ಷತೆಯಲ್ಲಿ ಜರುಗಲಿದೆ.

ಉಡುಪಿ ಶಾಸಕ ಯಶಪಾಲ್ ಎ. ಸುವರ್ಣ, ಪುತ್ತಿಗೆ ಶಾಖಾ ಮಠಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾ ಚಾರ್ಯ, ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ಪಣಿಯಾಡಿಯ ಜ್ಯೋತಿಷಿ ವಿದ್ವಾನ್ ಗೋಪಾಲಕೃಷ್ಣ ಜೋಯಿಸ್, ನಗರಸಭೆ ಸದಸ್ಯ ಗಿರೀಶ್ ಅಂಚನ್, ಸ್ಕೌಟ್ ಆ್ಯಂಡ್ ಗೈಡ್ಸ್ ಮುಖ್ಯಸ್ಥ ಇಂದ್ರಾಳಿ ಜಯಕರ ಶೆಟ್ಟಿ, ಕಡಿಯಾಳಿ ಮಹಿಷ ಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಜಯರಾಘವ ರಾವ್, ನ್ಯಾಯವಾದಿ ರಾಮಚಂದ್ರ ಅಡಿಗ ಮುಖ್ಯ ಅತಿಥಿಗಳಾಗಿರುವರು.

ರಥಕ್ಕೆ 20ಲಕ್ಷ ರೂ.ವೆಚ್ಚ: ಉತ್ಸವಕ್ಕೆ ರಥವನ್ನು ಬೇರೆಡೆಯಿಂದ ತರಬೇಕಾದ ಅನಿವಾರ್ಯತೆ ಹಿನ್ನೆಲೆಯಲ್ಲಿ ದೇಣಿಗೆ ಸಂಗ್ರಹಿಸಿ 20ಲಕ್ಷ ರೂ. ವೆಚ್ಚದಲ್ಲಿ ರಥ ನಿರ್ಮಿಸಲಾಗಿದೆ. ರಥದ ಕೊಟ್ಟಿಗೆ 2ಲಕ್ಷ ರೂ. ವೆಚ್ಚ, ದೇವಳದ ಪ್ರಾಂಗಣಕ್ಕೆ ಇಂಟರ್‌ಲಾಕ್ ಅಳವಡಿಕೆಗೆ 15ಲಕ್ಷ ರೂ. ವೆಚ್ಚವಾಗಿದೆ.

ಕೋಟೇಶ್ವರದ ಪರಮೇಶ್ವರ ಆಚಾರ್ಯ ರಥದ ಶಿಲ್ಪಿಯಾಗಿದ್ದು ಮಾ. 7ರಂದು ಹೊಸ ರಥದ ಉತ್ಸವ ನೆರವೇರಲಿದೆ ಎಂದು ವಿಜಯ ರಾಘವ ರಾವ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X