ಆ.1ರಂದು ವಿಶ್ವ ಸ್ತನ್ಯಪಾನ ಸಪ್ತಾಹ ಉದ್ಘಾಟನೆ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ-2025ರ ಉದ್ಘಾಟನಾ ಸಮಾರಂಭ ಆಗಸ್ಟ್ 1ರಂದು ಬೆಳಗ್ಗೆ 9:30ಕ್ಕೆ ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಜಿ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ.ಅಶೋಕ್ ಹೆಚ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಜ್ಯೋತ್ಸ್ನಾ ಬಿ.ಕೆ, ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಾಜ್‌ಗೋಪಾಲ್ ಭಂಡಾರಿ, ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ ಹಾಗೂ ಮತ್ತಿತರರು ಭಾಗವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಸಂದೀಪ್ ಹಾಗೂ ಪ್ರಸೂತಿ ತಜ್ಞೆ ಡಾ.ಕವಿತಾ ಮಾಹಿತಿ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.





