ಮಾ.10ರಂದು ಎಲ್‌ಪಿಜಿ ದರ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ, ಮಾ.9: ಎಲ್‌ಪಿಜಿ ದರ ಏರಿಕೆ ಮಾಡಿರುವ ಕೇಂದ್ರ ಸರಕಾರದ ಜನವಿರೋಧಿ ನೀತಿಯ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾ.10ರಂದು ಬೆಳಗ್ಗೆ 10ಗಂಟೆಗೆ ಉಡುಪಿ ಬ್ರಹ್ಮಗಿರಿ ಸರ್ಕಲ್ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡೆಯುವೆಯೂ ಭಾರತದಲ್ಲಿ ಇಂಧನ ಕೊರತೆ ಇಲ್ಲ, ಆದ್ದರಿಂದ ನಮ್ಮ ಇಂಧನ ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೆಂದ್ರ ಪೆಟ್ರೋಲಿಂ ಸಚಿವರು ಸ್ಪಷ್ಟಪಡಿಸಿರುವಾಗ ಕೇಂದ್ರ ಸರಕಾರವು ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು ಏಕಾಏಕಿ 60ರೂ.ಗೆ ಹೆಚ್ಚಳ ಮಾಡಿದೆ. ಅದೇ ರೀತಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 115 ರೂ.ಗೆ ಏರಿಕೆ ಮಾಡಲಾಗಿದೆ. ಕಳೆದ 11 ತಿಂಗಳಲ್ಲಿ ಗೃಹಬಳಕೆಯ ಸಿಲಿಂಡರ್ ಬೆಲೆ ಒಟ್ಟು 110ರೂ. ಹೆಚ್ಚಳ ಮಾಡಿರುವುದು ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಮೇಲೆ ಹಾಗೂ ಗೃಹ ಬಳಕೆ ಗ್ರಾಹಕರು ಹಾಗೂ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಭಾರಿ ಪರಿಣಾಮ ಉಂಟಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





