ಅ.10ರಂದು ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಉಡುಪಿ, ಅ.9: ಇಲ್ಲಿಯ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಫಲಾನುಭವಿಗಳ ಸಮಾವೇಶ ಪಂಚ ಗ್ಯಾರಂಟಿ ಸಂಭ್ರಮೋತ್ಸವವನ್ನು ಅ.10ರಂದು ಉದ್ಯಾವರದಲ್ಲಿ ಹಮ್ಮಿ ಕೊಳ್ಳಲಾಗಿದೆ ಎಂದು ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಿತಿನ್ ಜೆ. ಸಾಲಿಯನ್ ತಿಳಿಸಿದ್ದಾರೆ.
ಉದ್ಯಾವರ ಮಠದಂಗಡಿಯ ಕೆನರಾ ಬ್ಯಾಂಕ್ ಬಳಿ ನಡೆಯಲಿರುವ ಈ ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಭಾಗವಹಿಸಲಿರುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




