ಕಾಪು ಎನ್ನೆಸ್ಸೆಸ್ ಶಿಬಿರದಲ್ಲಿ 10 ಕ್ವಿಂಟಾಲ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹ

ಕಾಪು : ಕಾಪು ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟೀಯ ಸೇವಾ ಯೋಜನೆ(ಎನ್ಎಸ್ಎಸ್)ಯ ವಾರ್ಷಿಕ ವಿಶೇಷ ಶಿಬಿರವು ಕಾಪುವಿನ ಮಹಾದೇವಿ ಪ್ರೌಢಶಾಲೆಯಲ್ಲಿ ಜರಗಿತು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು. ಸತತ ಏಳು ದಿನಗಳ ಕಾಲ ನಡೆದ ಶಿಬಿರದಲ್ಲಿ ಭಾಗವಹಿಸಿದ 50 ವಿದ್ಯಾರ್ಥಿಗಳು ಶಿಬಿರಾಧಿಕಾರಿ ಪರಮೇಶ್ವರ ಎಂ.ಮೊಗವೀರ ನೇತೃತ್ವದಲ್ಲಿ ಕಾಪು ಬೀಚ್, ಕಾಪು ಪಟ್ಟಣದ ಪರಿಸರದಲ್ಲಿದ್ದ ಸುಮಾರು 10 ಕ್ವಿಂಟಾಲ್ನಷ್ಟು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಣೆ ಮಾಡಿ ವಿಲೇವಾರಿ ಮಾಡಿದರು.
ಮಕ್ಕಳ ವ್ಯಕ್ತಿತ್ವ ವಿಕಾಸ, ಯೋಗ, ಕಾನೂನು, ಪರಿಸರ ವಿಷಯಕ್ಕೆ ಸಂಬಂಧಿಸಿದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ವಿನಯ ಕುಮಾರ ಸೊರಕೆ ಸಮಾರೋಪ ಭಾಷಣ ಮಾಡಿದರು. ಪ್ರಾಂಶುಪಾಲ ನಾಗರಾಜ, ಕಾಪು ಬೀಚ್ ಫ್ರೆಂಡ್ಸ್ ಅಧ್ಯಕ್ಷ ಚಂದ್ರಶೇಖರ, ಮಾಧವ ಪಾಲನ, ಮಮತಾ ಶೆಟ್ಟಿ, ವಿದ್ವಾನ್ ಪ್ರಕಾಶ್ ಅಮ್ಮಣ್ಣಯ್ಯ, ಮಧುಕರ್ ಅಂಚನ್, ಕಾಲೇಜಿನ ಉಪನ್ಯಾಸಕರು ಮತ್ತು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ಶಿಬಿರಾಧಿಕಾರಿ ಪರಮೇಶ್ವರ್ ಮೊಗವೀರ ಸ್ವಾಗತಿಸಿ ವರದಿ ವಾಚನ ಮಾಡಿದರು. ಆಶಾ ಕಾರ್ಯಕ್ರಮ ನಿರೂಪಿಸಿದರು. ಶಿಬಿರಾಧಿಕಾರಿ ಲಕ್ಷ್ಮೀಕಾಂತ್ ವಂದಿಸಿದರು.






