ಫೆ.11ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಉದ್ಯಾವರ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಸಂಘ, ಎಂಇಟಿ ಅಲುಮ್ನಿ ಅಸೋಸಿಯೇಶನ್, ಉದ್ಯಾವರ ಮುಸ್ಲಿಮ್ ಯಂಗ್‌ಮೆನ್ಸ್ ಅಸೋಸಿಯೇಶನ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವುಗಳ ಸಹಯೋಗ ದೊಂದಿಗೆ ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ನೇತೃತ್ವದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಫೆ.11ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1ಗಂಟೆಯವರೆಗೆ ಉದ್ಯಾವರ ಕೊರಂಗ್ರಪಾಡಿ ಎಂಇಟಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಘಟಕರಾದ ಡಾ.ಮುಹಮ್ಮದ್ ಫೈಸಲ್(ಮೊ- 9844873282), ಮಹಾಬಲೇಶ್ (ಮೊ-9480579398), ಸಾಲಿಫ್ (9972385985), ಯಾಸೀನ್(8748904871) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story





