ಸೆ.12ರಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಕಳಕ್ಕೆ ಭೇಟಿ

ಉಡುಪಿ, ಸೆ.11: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಸೆ.12ರಂದು ಜಿಲ್ಲೆಯ ಕಾರ್ಕಳದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಶುಕ್ರವಾರ ಬೆಳಗ್ಗೆ 11:30ಕ್ಕೆ ಬಜಪೆ ವಿಮಾನ ನಿಲ್ದಾಣದಿಂದ ಕಾರ್ಕಳ ಕ್ಕೆ ಆಗಮಿಸುವ ಸಚಿವೆ, ತಾಲೂಕಿನ ನೀರೆ (ಬೈಲೂರು) ಗ್ರಾಮ ಪಂಚಾಯತ್‌ನ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅಪರಾಹ್ನ 2:30ಕ್ಕೆ ಕಾರ್ಕಳ ಮಂಜುನಾಥ ಪೈ ಸಭಾಭವನದಲ್ಲಿ ಗ್ಯಾರಂಟಿ ಸಮಾವೇಶ ಹಾಗೂ ಅದಾಲತ್‌ನಲ್ಲಿ ಭಾಗವಹಿಸಿ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
Next Story





