Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಫೆ.12: ಕೇಂದ್ರ ಸರಕಾರದ 4 ಕಾರ್ಮಿಕ...

ಫೆ.12: ಕೇಂದ್ರ ಸರಕಾರದ 4 ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಜೆಸಿಟಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Feb 2026 9:03 PM IST
share
ಫೆ.12: ಕೇಂದ್ರ ಸರಕಾರದ 4 ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಜೆಸಿಟಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಉಡುಪಿ, ಜ.2: ದೇಶದ ಕೋಟ್ಯಾಂತರ ಮಂದಿ ಕಾರ್ಮಿಕರನ್ನು ಮಾಲಕರ ಗುಲಾಮರನ್ನಾಗಿಸುವ ಕೇಂದ್ರದ ನಾಲ್ಕು ನೂತನ ಕಾಮಿಕ ಸಂಹಿತೆಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ಒಂದು ದಿನ ಬೃಹತ್ ಪ್ರತಿಭಟನೆಯನ್ನು ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಫೆ.12ರಂದು ಉಡುಪಿ ಜಿಲ್ಲೆಯಾದ್ಯಂತ ಹಮ್ಮಿಕೊ ಳ್ಳಲಾಗುವುದು ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ.

ಉಡುಪಿಯ ಪ್ರೆಸ್‌ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿಯ ಕಾರ್ಮಿಕ ಸಂಘಟನೆ ಬಿಎಂಎಸ್‌ನ್ನು ಹೊರತು ಪಡಿಸಿ ದೇಶದ ಎಲ್ಲಾ 10 ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಘೋಷಿಸಿವೆ. ಅಲ್ಲದೇ ರೈತ, ಕಾರ್ಮಿಕ, ಕೃಷಿ ಕೂಲಿಕಾರ, ಮಹಿಳಾ, ವಿದ್ಯಾರ್ಥಿ-ಯುವಜನ, ವಿಮಾ, ಬ್ಯಾಂಕ್ ನೌಕರರ ಸಂಘಗಳು, ದಲಿತ ಸಂಘಟನೆಗಳು ಈ ಮುಷ್ಕರಕ್ಕೆ ಬೆಂಬಲವನ್ನು ಸಾರಿವೆ ಎಂದು ಹೇಳಿದರು.

ದೇಶದಲ್ಲಿದ್ದ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿರುವ ಕೇಂದ್ರ ಸರಕಾರ ಅವುಗಳನ್ನು 4 ಕಾರ್ಮಿಕ ಸಂಹಿತೆಗಳನ್ನಾಗಿಸಿ ಕಳೆದ ನವೆಂಬರ್ 21ರಂದು ಅಧಿಕೃತವಾಗಿ ಜಾರಿಗೊಳಿಸುವ ಪ್ರಕಟಣೆ ನೀಡಿದೆ. ಈ ಸಂಹಿತೆಗಳು 2019 ಮತ್ತು 2020ರಲ್ಲೇ ಲೋಕಸಭೆಯಲ್ಲಿ ಪಾಸಾಗಿದ್ದರೂ, ದೇಶಾದ್ಯಂತ ಕಾರ್ಮಿಕ ವರ್ಗ ಇವುಗಳ ವಿರುದ್ಧ ನಡೆಸಿದ ಸತತ ಹೋರಾಟ ದಿಂದ ಅದನ್ನು ಜಾರಿಗೊಳಿಸಲು ಸಾದ್ಯವಾಗಿರಲಿಲ್ಲ ಎಂದವರು ಹೇಳಿದರು.

ಆದರೆ ಇದೀಗ ಕೇಂದ್ರದ ಬಿಜೆಪಿ ಸರಕಾರ ಕಾರ್ಪೋರೇಟ್ ಕಂಪೆನಿಗಳ ಹಾಗೂ ಬಂಡವಾಳಗಾರರ ಒತ್ತಡದಿಂದ ಈ ಎಲ್‌ಪಿಜಿ ನೀತಿಗಳನ್ನು ಆದ್ಯತೆ ಮೇಲೆ ಜಾರಿಗೊಳಿಸಲು ಮುಂದಾಗಿವೆ. ಇದರಿಂದಾಗಿ ವಿದ್ಯುತ್, ದೂರ ಸಂಪರ್ಕ, ಕಲ್ಲಿದ್ದಲು, ಗಣಿಗಾರಿಕೆ, ರೈಲ್ಲ, ಹೆದ್ದಾರಿ, ಬಂದರುಗಳೆಲ್ಲವೂ ಖಾಸಗಿ ಕಾರ್ಪೋರೇಟ್ ಕಂಪೆನಿಗಳಿಗೆ ವರ್ಗಾಯಿಸಲಾಗುತ್ತಿದೆ ಎಂದರು.

ಬಿಜೆಪಿ ಸರಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆ ಜಾರಿಗೊಂಡರೆ ಬಂಡವಾಳಶಾಹಿಗಳಿಗೆ ಅಗ್ಗದ ದರದಲ್ಲಿ ಕಾರ್ಮಿಕರನ್ನು ಮಾರಾಟ ಮಾಡಲು ಅವಕಾಶವಿದೆ. ಇದರಿಂದ ಶ್ರೀಮಂತರು ಹಾಗೂ ಬಡವರ ನಡುವಿನ ಅಸಮಾನತೆ ಇನ್ನಷ್ಟು ಹೆಚ್ಚುವುದು ಖಂಡಿತ ಎಂದು ಸುರೇಶ್ ಕಲ್ಲಾಗರ ಹೇಳಿದರು.

ಜೆಟಿಸಿ ಉಡುಪಿ ಜಿಲ್ಲಾ ಸಮಿತಿಯ ಸಂಚಾಲಕ ಕವಿರಾಜ್ ಕಾಂಚನ್ ಮಾತನಾಡಿ, ಫೆ.12ರಂದು ಉಡುಪಿ ಜಿಲ್ಲೆಯ ಉಡುಪಿ ಅಜ್ಜರಕಾಡು ಹುತಾತ್ಮ ಚೌಕದ ಬಳಿ (ಬೆಳಗ್ಗೆ 10:30), ಕಾರ್ಕಳ ಬಸ್ ನಿಲ್ದಾಣದ ಬಳಿ (10:00), ಕುಂದಾಪುರದ ಸ್ತ್ರ ಸರ್ಕಲ್ ಬಳಿ (9:30) ಹಾಗೂ ಬೈಂದೂರಿನ ತಹಶೀಲ್ದಾರ್ ಕಚೇರಿ ಎದುರು (9:30)ಕ್ಕೆ ಪ್ರತಿಭಟನೆ ನಡೆಯಲಿದೆ ಎಂದರು.

ಉಡುಪಿಯಲ್ಲಿ ಬೆಳಗ್ಗೆ 9:30ಕ್ಕೆ ಜೆಸಿಟಿ ನೇತೃತ್ವದಲ್ಲಿ ಬೃಹತ್ ಮೆರವಣಿಗೆ ಹಳ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯಿಂದ ಪ್ರಾರಂಭಗೊಂಡು ಕೆಎಂ ಮಾರ್ಗ, ಕೋರ್ಟ್ ರೋಡ್, ಜೋಡುಕಟ್ಟೆ ಮಾರ್ಗವಾಗಿ ಸಾಗಿ ಅಜ್ಜರಕಾಡು ಹುತಾತ್ಮ ಚೌಕದ ಬಳಿ ಮುಕ್ತಾಯಗೊಂಡು ಅಲ್ಲೇ ಬಹಿರಂಗ ಸಭೆ ನಡೆಯಲಿದೆ ಎಂದರು.

ಪತ್ರಿಕಾಗೋಷಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಶಶಿಧರ ಗೊಲ್ಲ, ಇಂಟಕ್‌ನ ಕಿರಣ್ ಹೆಗ್ಡೆ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ವಿ, ಎಐಟಿಯುಸಿಯ ಯು.ಶಿವಾನಂದ ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X