ಜು.13ರಂದು ಸಚಿವ ರಾಮಲಿಂಗಾರೆಡ್ಡಿ ಉಡುಪಿ ಜಿಲ್ಲೆಗೆ ಭೇಟಿ

ಉಡುಪಿ: ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಜು.13ರಂದು ರವಿವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 9 ಗಂಟೆಗೆ ಉಡುಪಿ ತಾಲೂಕು ಪೆರ್ಡೂರಿನ ಮಹತೋಭಾರ ಶ್ರೀಅನಂತಪದ್ಮನಾಭ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ‘ನಗಾರಿ ಗೋಪುರ’ದ ಶಿಲಾನ್ಯಾಸ ಕಾರ್ಯಕ್ರಮ ದಲ್ಲಿ ಭಾಗವಹಿಸಿ, ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





