Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾ.13ಕ್ಕೆ ಎಚ್.ಪಿ.ವಿ. ಲಸಿಕಾ...

ಮಾ.13ಕ್ಕೆ ಎಚ್.ಪಿ.ವಿ. ಲಸಿಕಾ ಅಭಿಯಾನಕ್ಕೆ ಚಾಲನೆ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ7 March 2026 9:32 PM IST
share
ಮಾ.13ಕ್ಕೆ ಎಚ್.ಪಿ.ವಿ. ಲಸಿಕಾ ಅಭಿಯಾನಕ್ಕೆ ಚಾಲನೆ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಮಾ.7: ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರನ್ನು ತಡೆಗಟ್ಟಲು 14 ವರ್ಷ ಪೂರ್ಣಗೊಂಡ ಹೆಣ್ಣು ಮಕ್ಕಳಿಗೆ ರಾಷ್ಟ್ರೀಯ ಎಚ್‌ಪಿವಿ ಲಸಿಕಾ ಅಭಿಯಾನ (ವ್ಯಾಕ್ಸಿನೇಶನ್ ಕ್ಯಾಂಪೇನ್) ಕಾರ್ಯಕ್ರಮವನ್ನು ಆರಂಭಿಸಿದ್ದು, ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣ ದಲ್ಲಿ ನಡೆದ ಎಚ್‌ಪಿವಿ ಚುಚ್ಚುಮದ್ದು ಲಸಿಕಾ ಕಾರ್ಯಕ್ರಮದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಈ ಲಸಿಕೆ ಗರ್ಭಕಂಠದ ಕ್ಯಾನ್ಸರ್‌ನಿಂದ ಹೆಣ್ಣುಮಕ್ಕಳಿಗೆ ರಕ್ಷಣೆ ನೀಡಲಿದೆ ಎಂದು ಅವರು ಹೇಳಿದರು.

14 ವಷರ್ ಪೂರ್ಣಗೊಂಡ ಆದರೆ 15 ವಷರ್ದೊಳಗಿನ ಹೆಣ್ಣು ಮಕ್ಕಳಿಗೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾ ಗುವುದು. ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಬಹುದಾದ ರೋಗವಾಗಿದ್ದು, ಎಚ್‌ಪಿವಿ ಚುಚ್ಚುಮದ್ದು ಪಡೆದು ಕೊಳ್ಳುವು ದರಿಂದ ಮಹಿಳೆಯರಲ್ಲಿ ಈ ಕ್ಯಾನ್ಸರ್‌ನ್ನು ತಡೆಗಟ್ಟಬಹುದು ಎಂದರು.

ಜಿಲ್ಲೆಯಲ್ಲಿ 11,274 ಮಕ್ಕಳಿಗೆ ಈ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಲಸಿಕೆಯ 0.5ಎಂಎಲ್‌ನ ಒಂದು ಡೋಸ್‌ನ್ನು ನೀಡಲಾ ಗುತ್ತದೆ. ಇದು ಸ್ವಯಂ ಪ್ರೇರಿತವಾಗಿದ್ದು, ಪೋಷಕರು ಅಥವಾ ಪಾಲಕರ ಒಪ್ಪಿಗೆ ಕಡ್ಡಾಯ ವಾಗಿದೆ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಹಾಗೂ ತಾಯಿ- ಮಕ್ಕಳ ಆಸ್ಪತ್ರೆಯಲ್ಲಿ ಮೂರು ತಿಂಗಳ ಕಾಲ ಲಸಿಕೆ ನೀಡಲಾಗುವುದು ಎಂದರು.

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮಾ.13ರಂದು ಬೆಳಗ್ಗೆ ಉಡುಪಿ ಬೋರ್ಡ್ ಹೈಸ್ಕೂಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲಾಗುವುದು. ಈ ಲಸಿಕೆ ಶೇ.93ರಷ್ಟು ಪರಿಣಾಮಕಾರಿಯಾಗಿದ್ದು ಇದರ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಎಚ್‌ಪಿವಿ ಲಸಿಕಾ ಅಭಿಯಾನಕ್ಕೆ ಫೆ.28ರಂದೇ ರಾಷ್ಟ್ರಮಟ್ಟದಲ್ಲಿ ಚಾಲನೆ ನೀಡಲಾಗಿದೆ.ಮುಂದಿನ ಮೂರು ತಿಂಗಳ ಅವಧಿಯಲ್ಲಿ ಆಯುಷ್ಮಾನ್ ಆರೋಗ್ಯ ಮಂದಿರ ಸೇರಿದಂತೆ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯಲು ಅವಕಾಶವಿದೆ ಎಂದರು.

ಮೊದಲ ಹಂತದಲ್ಲಿ 14 ವರ್ಷ ಮೇಲ್ಪಟ್ಟು, 15ವರ್ಷದೊಳಗಿನ ಹೆಣ್ಣು ಮಕ್ಕಳು ಲಸಿಕೆ ಪಡೆಯಲು ಅರ್ಹರಿದ್ದು, ಮುಂದಿನ ಹಂತದಲ್ಲಿ ವಯಸ್ಸಿನ ಪರಿಷ್ಕರಣೆ ನಡೆಯಲಿದೆ.

ಎಚ್‌ಪಿವಿ ವೈರಸ್‌ನಿಂದ ಬರಬಹುದಾದ ಗರ್ಭಕಂಠ ಕ್ಯಾನ್ಸರ್‌ನ್ನು ಈ ಲಸಿಕೆಯಿಂದ ನಿಯಂತ್ರಿಸಬಹುದಾಗಿದ್ದು, ಮಧ್ಯ ವಯಸ್ಸಿನ ಮಹಿಳೆಯರಿಗೆ ಆರೋಗ್ಯ ತಪಾಸಣಾಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸಲಾಗುತ್ತದೆ. ಇದರ ಪ್ರಯೋಜನವನ್ನು ಎಲ್ಲಾ ಹೆಣ್ಣುಮಕ್ಕಳು ಪಡೆಯಬೇಕು ಎಂದು ಕೋಟ ಮನವಿ ಮಾಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್, ಕಾದ್ರೋಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಬಸವರಾಜ್ ಜಿ ಹುಬ್ಬಳ್ಳಿ, ಜಿಲ್ಲಾ ಸರ್ಜನ್ ಡಾ.ಅಶೋಕ್, ಆರ್.ಸಿ.ಎಚ್ ಅಧಿಕಾರಿ ಜ್ಯೋತ್ಸ್ನಾ ಬಿ.ಕೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X