ಸೆ.13ರಂದು ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ, ಸೆ.4: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆ.13ರಂದು ಹೆಜಮಾಡಿಯ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ.
ಸ್ಪರ್ಧೆಗಳ ವಿವರ: ಪುರುಷರಿಗೆ: ಅಥ್ಲೆಟಿಕ್ಸ್(100 ಮೀ., 200 ಮೀ., 400 ಮೀ., 800 ಮೀ., 1500 ಮೀ., 5000 ಮೀ., 10000 ಮೀ., ಉದ್ದಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100ಮೀ ರಿಲೇ, 4*400 ಮೀ.ರಿಲೇ). ಗುಂಪು ಆಟಗಳು: ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್ಬಾಲ್, ಥ್ರೋಬಾಲ್.
ಮಹಿಳೆಯರಿಗೆ: ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದ ಜಿಗಿತ, ಎತ್ತರಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100ಮೀ ರಿಲೇ, 4*400 ಮೀ.ರಿಲೇ) ಗುಂಪು ಆಟಗಳು: ವಾಲಿಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್.
ಒಬ್ಬರಿಗೆ ಎರಡು ವೈಯಕ್ತಿಕ ಹಾಗೂ ಒಂದು ಗುಂಪು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದ್ದು, ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಹಾಗೂ ಗುಂಪು ಕ್ರೀಡೆಯಲ್ಲಿ ಪ್ರಥಮ ಸ್ಥಾನ ಪಡೆದ ತಂಡವು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.
ಕ್ರೀಡಾಪಟುಗಳು https://dasaracmcup.in| ಮೂಲಕ ನೋಂದಾಯಿಸಿಕೊಅಡು ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರವೀಂದ್ರ ನಾಯ್ಕ್, ಸಹಾಯಕ ಯುವಜನ ಸೇವಾ ಕ್ರೀಡಾಧಿ ಕಾರಿ, ಕಾಪು ತಾಲೂಕು ದೂ.ಸಂ: 9480578253 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.






