ನ.13: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ

ಉಡುಪಿ, ನ.11: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ನ.13ರ ಬೆಳಗ್ಗೆ 8:45ಕ್ಕೆ ಉಡುಪಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ 9 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಸಚಿವರು 10 ಗಂಟೆಗೆ ಉಡುಪಿ ಅಜ್ಜರಕಾಡಿನಲ್ಲಿ ನೂತನ ಎಫ್ಎಂ ಸ್ಟೇಷನ್ಗೆ ಚಾಲನೆ ನೀಡಲಿದ್ದಾರೆ.
ಬಳಿಕ ಉಡುಪಿಯಿಂದ ಮಂಗಳೂರಿಗೆ ತೆರಳುವ ಅಶ್ವಿನಿ ವೈಷ್ಣವ್, ಮಂಗಳೂರಿನಲ್ಲಿ ಮಂಗಳೂರು ಜಂಕ್ಷನ್- ಯಶವಂತಪುರ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಕೇಂದ್ರ ಸಚಿವರ ಭೇಟಿಯ ಸಂದರ್ಭ ದಲ್ಲಿ ಜಿಲ್ಲೆಯ ಶಾಸಕರು ಉಪಸ್ಥಿತರಿರುವರು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story




