ಮಾ.14ರಂದು ಮದ್ಯ, ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ವಿಚಾರಸಂಕಿರಣ

ಉಡುಪಿ, ಮಾ.13: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಹಾಗೂ ಯುವ ರೆಡ್‌ಕ್ರಾಸ್ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಹಯೋಗದಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ ವೊಂದು ಮಾ.14ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲರಾದ ಡಾ.ನಿತ್ಯಾನಂದ ವಿ. ಗಾಂವಕರ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರೆಡ್‌ಕ್ರಾಸ್ ಘಟಕದ ಸಂಚಾಲಕ ಪ್ರಶಾಂತ್ ಎನ್ ಮತ್ತಿತರರು ಭಾಗವಹಿಸಲಿದ್ದು, ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಮನೋವೈದ್ಯ ಡಾ.ವಾಸುದೇವ್ ವಿಶೇಷ ಉಪನ್ಯಾಸ ನೀಡಲಿ ದ್ದಾರೆ ಎಂದು ಪ್ರಕಟಣೆ ತಿಳಿಸಿದೆ.