Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯ 51 ಪರೀಕ್ಷಾ...

ಉಡುಪಿ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ 14,151 ಪರೀಕ್ಷಾರ್ಥಿಗಳು: ಡಿಸಿ ಸ್ವರೂಪಾ ಟಿ.ಕೆ.

ವಾರ್ತಾಭಾರತಿವಾರ್ತಾಭಾರತಿ12 March 2026 7:30 PM IST
share
ಉಡುಪಿ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ 14,151 ಪರೀಕ್ಷಾರ್ಥಿಗಳು: ಡಿಸಿ ಸ್ವರೂಪಾ ಟಿ.ಕೆ.
ಮಾ.18ರಿಂದ ಎಸೆಸೆಲ್ಸಿ ಪರೀಕ್ಷೆ

ಉಡುಪಿ, ಮಾ.12: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆ ಮಾರ್ಚ್ 18ರಿಂದ ಎಪ್ರಿಲ್ 2ರವರೆಗೆ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆಯಲಿದ್ದು, ಈ ಬಾರಿ ಒಟ್ಟು 14,151 ಮಂದಿ ಪರೀಕ್ಷಾರ್ಥಿಗಳು ಪರೀಕ್ಷೆಯಲ್ಲಿ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪರೀಕ್ಷೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ ವಿದ್ಯಾರ್ಥಿಗಳು ಸುಗಮವಾಗಿ, ಭಯಮುಕ್ತ ವಾತಾವರಣದಲ್ಲಿ ಪರೀಕ್ಷೆ ಬರೆಯಲು ಬೇಕಾದ ಎಲ್ಲಾ ಪೂರಕ ವಾತಾವರಣ ಕಲ್ಪಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಜಿಲ್ಲೆಯಲ್ಲಿ ಈ ಬಾರಿ ಒಟ್ಟಾರೆಯಾಗಿ 14,151 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ ಹೊಸದಾಗಿ ಪರೀಕ್ಷೆ ಬರೆಯುವವರು 13,516 ವಿದ್ಯಾರ್ಥಿಗಳಾದರೆ, ಉಳಿದಂತೆ 295 ಮಂದಿ ರೆಗ್ಯೂಲರ್ ಪುನರಾವರ್ತಿತ ಅಭ್ಯರ್ಥಿಗಳು, 293 ಖಾಸಗಿ ಅಭ್ಯರ್ಥಿಗಳು ಹಾಗೂ 47 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸಹ ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 7353 ಮಂದಿ ವಿದ್ಯಾರ್ಥಿಗಳಾದರೆ, 6798 ಮಂದಿ ವಿದ್ಯಾರ್ಥಿನಿ ಯರು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಜಿಲ್ಲೆಯ 14,151 ಪರೀಕ್ಷಾರ್ಥಿಗಳಿಗಾಗಿ ಜಿಲ್ಲೆಯ ಒಟ್ಟು 51 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇವುಗಳಲ್ಲಿ 15 ಉಡುಪಿ ವಲಯದಲ್ಲಿ, 11 ಬ್ರಹ್ಮಾವರದಲ್ಲಿ, 9 ಕಾರ್ಕಳದಲ್ಲಿ ಹಾಗೂ ಬೈಂದೂರು ಮತ್ತು ಕುಂದಾಪುರದಲ್ಲಿ ತಲಾ 8 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿವೆ. ಈ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರೀಕ್ಷಾ ಕೇಂದ್ರದ ಕ್ಯಾಂಪಸ್‌ಗಳಲ್ಲಿ ಸಿಸಿಟಿವಿಯನ್ನು ತಪ್ಪದೇ ಅಳವಡಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

51 ಪರೀಕ್ಷಾ ಕೇಂದ್ರಗಳಲ್ಲಿ 686 ಕೊಠಡಿಗಳನ್ನು ಪರೀಕ್ಷಾ ಕಾರ್ಯಕ್ಕೆ ನಿಗದಿಪಡಿಸಲಾಗಿದೆ. ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಅಧೀಕ್ಷಕರು, ಮೇಲ್ವಿಚಾರಕರು, ಸ್ಥಾನಿಕ ಜಾಗೃತಿ ದಳದ ಅಧಿಕಾರಿಗಳು, ಮೊಬೈಲ್ ಸ್ವಾಧೀನ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ವಿಚಕ್ಷಣಾ ದಳ, ಪರೀಕ್ಷಾ ನೋಡೆಲ್ ಅಧಿಕಾರಿಗಳು ಸೇರಿ ದಂತೆ ಈಗಾಗಲೇ 1350 ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದವರು ತಿಳಿಸಿದರು.

ಭವಿಷ್ಯ ರೂಪಿಸುವ ಪರೀಕ್ಷೆ: ಎಸೆಸೆಲ್ಸಿ ಪರೀಕ್ಷೆ ಎಂಬುದು ವಿದ್ಯಾರ್ಥಿಗಳ ಬದುಕಿನಲ್ಲಿ ಭವಿಷ್ಯ ರೂಪಿಸುವ ಪರೀಕ್ಷೆ ಯಾಗಿರುತ್ತದೆ. ಹೀಗಾಗಿ ಈ ಪರೀಕ್ಷೆ ಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಜಾಗೃತೆ ವಹಿಸಿ, ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡಬೇಕು. ಪರೀಕ್ಷೆ ಸುಲಲಿತ ಹಾಗೂ ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಇದಕ್ಕೆ ಜಿಲ್ಲಾಡಳಿತದ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸ್ವರೂಪಾ ಟಿ.ಕೆ.ಭರವಸೆ ನೀಡಿದರು.

ಜಿಲ್ಲೆಯು ಈ ಬಾರಿಯೂ ರಾಜ್ಯದಲ್ಲಿ ಅಗ್ರಸ್ಥಾನ ಉಳಿಸಿಕೊಳ್ಳಲು ಹಾಗೂ ಪ್ರತಿಶತಃ ನೂರರಷ್ಟು ಫಲಿತಾಂಶವನ್ನು ದಾಖಲಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.

ಬಸ್ ವ್ಯವಸ್ಥೆ: ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುವ ವಿದ್ಯಾರ್ಥಿ ಗಳಿಗೆ ಸೂಕ್ತ ಸಮಯಕ್ಕೆ ಆಗಮಿಸಲು ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ ಸಾಕಷ್ಟು ಬಸ್‌ಗಳನ್ನು ಪರೀಕ್ಷಾ ಸಂದರ್ಭದಲ್ಲಿ ಕಾರ್ಯಾಚರಿಸುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರದ ಬಳಿಯೆ ಬಸ್ ನಿಲುಗಡೆಗೆ ಅವಕಾಶ ಮಾಡಿಕೊಡ ಬೇಕು ಎಂದು ಅವರು ಕೆಎಸ್ಸಾರ್ಟಿಸಿ ನಿಗಮದ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ವಿದ್ಯುತ್ ಕಡಿತ ಬೇಡ: ಪರೀಕ್ಷಾ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜು ಇರುವಂತೆ ಮೆಸ್ಕಾಂ ನೋಡಿ ಕೊಳ್ಳಬೇಕು. ಪರೀಕ್ಷೆ ಆರಂಭದಿಂದ ಎಪ್ರಿಲ್ ಅಂತ್ಯದವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾದಿಕಾರಿ, ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಿಸಿಲಿನ ಶಾಖಾಘಾತಕ್ಕೆ ಮಕ್ಕಳು ತುತ್ತಾಗುವ ಸಂಭವವಿದ್ದು, ಮಕ್ಕಳಿಗೆ ತೊಂದರೆ ಆಗದಂತೆ ಪರೀಕ್ಷಾ ಕೇಂದ್ರ ಗಳಲ್ಲಿ ತುರ್ತು ಚಿಕಿತ್ಸೆ ನೀಡಲು ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಓಆರ್‌ಎಸ್ ದ್ರಾವಣವನ್ನು ಸಹ ಹೆಚ್ಚು ಸಂಗ್ರಹಿಸಿಟ್ಟುಕೊಳ್ಳುವಂತೆ ಕ್ರಮಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಿಷೇಧಾಜ್ಞೆ: ಪರೀಕ್ಷಾ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರದ ಸುತ್ತಲೂ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸಹ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾದಿಕಾರಿ ಹೇಳಿದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಎಸೆಸೆಲ್ಸಿ ಪರೀಕ್ಷೆಯಲ್ಲಿ ಕೆಲವು ನಿಯಮಾವಳಿಗಳನ್ನು ಸಡಿಲಗೊಳಿಸಿದ್ದು, ವಿದ್ಯಾರ್ಥಿ ಗಳು ಉತ್ತೀರ್ಣರಾಗುವುದರ ಜೊತೆಗೆ ಉನ್ನತ ಶ್ರೇಣಿ ಪಡೆಯಲು ಪ್ರಯತ್ನಿ ಸುವಂತೆ ಅವರಿಗೆ ಪ್ರೊತ್ಸಾಹ ನೀಡಿ, ಮನವೊಲಿಸಬೇಕು. ಬೇಸಿಗೆ ಪ್ರಾರಂಭಗೊಂಡಿರುವ ಕಾರಣ ಕೇಂದ್ರಗಳಲ್ಲಿ ಕುಡಿಯುವ ನೀರು ಸಹಿತ ಮೂಲಭೂತ ಸೌಲಭ್ಯವನ್ನು ಕಲ್ಪಿಸಿ, ಕಾಳಜಿ ವಹಿಸಬೇಕು ಎಂದರು.

ಸಭೆಯಲ್ಲಿ ಮಂಗಳೂರು ಸಿಟಿಇ ಪ್ರಾಂಶುಪಾಲೆ ಹಾಗೂ ಸಹ ನಿರ್ದೇಶಕಿ ಪುಷ್ಪಲತಾ, ಸಹಾಯಕ ಕಮಿಷನರ್ ರಶ್ಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ್ ಹುಬ್ಬಳ್ಳಿ, ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಇತರರು ಉಪಸ್ಥಿತರಿದ್ದರು.

"ಮೊಬೈಲ್ ನಿಷಿದ್ಧ: ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್, ಸ್ಮಾರ್ಟ್‌ವಾಚ್‌ಗಳನ್ನು ತರುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರ ಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವ ಬಗ್ಗೆ ಪರಿಶೀಲನೆ ನಡೆಸಲು ತಂಡವನ್ನು ನೇಮಿಸಲಾಗಿದ್ದು, ಈ ತಂಡ ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿ ಮೂಲಭೂತ ಸೌಲಭ್ಯ ಅಳವಡಿಸಿರುವ ಕುರಿತು ವರದಿ ನೀಡಿದೆ".

-ಸ್ವರೂಪಾ ಟಿ.ಕೆ., ಉಡುಪಿ ಜಿಲ್ಲಾಧಿಕಾರಿ.






Tags

candidatesexaminationcentersUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X