15 ದಿನಗಳಲ್ಲಿ 23 ಗಾಂಜಾ ಸೇವನೆ ಪ್ರಕರಣ ದಾಖಲು; 28 ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಉಡುಪಿ ಎಸ್ಪಿ

ಹರಿರಾಂ ಶಂಕರ್
ಉಡುಪಿ, ಸೆ.20: ಉಡುಪಿ ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ ಗಾಂಜಾ ಸೇವನೆ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಒಟ್ಟು 23 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಒಟ್ಟು 28 ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಒಟ್ಟು 14 ಪ್ರಕರಣ ದಾಖಲಾಗಿದ್ದು, 16 ಆರೋಪಿಗಳು, ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದ್ದು, 4 ಆರೋಪಿಗಳು, ಕುಂದಾಪುರ ಪೊಲೀಸ್ ಠಾಣೆಯಲ್ಲಿ 2 ಪ್ರಕರಣ ದಾಖಲಾಗಿದ್ದು, 2 ಆರೋಪಿಗಳು, ಹೆಬ್ರಿ, ಕಾಪು, ಕಾರ್ಕಳ ಗ್ರಾಮಾಂತರ, ಪಡುಬಿದ್ರಿ ಪೊಲೀಸ್ ಠಾಣೆ ಗಳಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದು, ಒಟ್ಟು 6 ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಗಾಂಜಾ ಸೇವನೆ ಮತ್ತು ಸರಬರಾಜು ಪ್ರಕರಣಗಳ ವಿರುದ್ದ ಕಟ್ಟುನಿಟ್ಟಿನ ಕ್ರಮವನ್ನು ನಿರಂತರ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





