ಫೆ.16: ಮಕ್ಕಳ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾರ
ಉಡುಪಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಸರಕಾರಿ ಪೌಢಶಾಲಾ ಮುಖ್ಯ ಶಿಕ್ಷಕರು, ವಿವಿಧ ಇಲಾಖೆಗಳ ವಸತಿ ನಿಲಯದ ಮೇಲ್ವಿಚಾರಕರು ಮತ್ತು ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರಿಗೆ ಬಾಲನ್ಯಾಯ ಕಾಯ್ದೆ 2015 ತಿದ್ದುಪಡಿ 2021, ಮಕ್ಕಳ ರಕ್ಷಣಾ ನೀತಿ 2016, ಆರ್‌ಟಿಇ ಕಾಯ್ದೆ 2009 ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾರವನ್ನು ಫೆ.16ರ ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ದಿನೇಶ್ ಹೆಗ್ಡೆ ಉದ್ಘಾಟಿಸಲಿದ್ದು, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ, ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ದರ್ಶಿ ಶರ್ಮಿಳಾ ಎಸ್, ಜಿಲ್ಲಾ ಬಾಲನ್ಯಾಯ ಮಂಡಳಿ ಪ್ರಧಾನ ನ್ಯಾಯಾಧೀಶ ಹಾಗೂ 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಸೋಮನಾಥ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ. ಪುರ್ಟಾಡೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ. ಮತ್ತಿತರರು ಭಾಗವಹಿಸುವರು.
ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿಸೋಜ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಹಾಗೂ ನ್ಯಾಯವಾದಿ ರಾಜೇಶ್ ಎ .ಆರ್ ಹಾಗೂ ಜಿಲ್ಲಾ ಡಯಟ್ ಉಪನ್ಯಾಸಕ ಯೋಗ ನರಸಿಂಹ ಸ್ವಾಮಿ ಉಪನ್ಯಾಸ ನೀಡಲಿದ್ದಾರೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.







