ಸೆ.16ರಂದು ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ; ಕಾರ್ಮಿಕ ಸಚಿವ ಸಂತೋಷ್ ಲಾಡ್ ಭಾಗಿ

ಉಡುಪಿ, ಸೆ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ ಉಡುಪಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯ ಕ್ರಮ ಸೆ.16ರ ಬೆಳಗ್ಗೆ 11 ಗಂಟೆಗೆ ಮಿಷನ್ ಕಾಂಪೌಂಡ್‌ನ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್, ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್. ವಿ. ಪ್ರಸಾದ್, ಕಾರ್ಮಿಕ ಇಲಾಖೆ ಆಯುಕ್ತ ಡಾ. ಹೆಚ್. ಎನ್. ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿ ಭಾರತಿ ಡಿ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಆಯುಕ್ತ ಯೋಗೀಶ್ ಎ. ಎಂ, ಜಂಟಿ ಕಾರ್ಮಿಕ ಆಯುಕ್ತ ಡಾ.ಎಸ್.ಬಿ ರವಿಕುಮಾರ್, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹಾಗೂ ಇತರರು ಭಾಗವಹಿಸಲಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.







