ಸೆ.16ರಂದು ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭರತ್ ಪ್ರೆಸ್ ಎದುರುಗಡೆಯ ಡಿ ಮಾರ್ಟ್‌ನಲ್ಲಿ ವಿವಿಧ ಹುದ್ದೆಗಳಿಗೆ ಸೆಪ್ಟಂಬರ್ 16 ರಂದು ಬೆಳಗ್ಗೆ 10:30ಕ್ಕೆ ನೇರ ಸಂದರ್ಶನ ನಡೆಯಲಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8150961875 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಪ್ರಕಟಣೆ ತಿಳಿಸಿದೆ.
Next Story




