ಫೆ.16,17: ಸಚಿವ ಸತೀಶ ಜಾರಕಿಹೊಳಿ ಉಡುಪಿಗೆ

ಉಡುಪಿ, ಫೆ.14: ಕರ್ನಾಟಕ ಸರಕಾರದ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ ಜಾರಕಿಹೊಳಿ ಅವರು ಫೆಬ್ರವರಿ 16 ಮತ್ತು 17ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆ.16ರಂದು ಸಂಜೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡಲಿರುವ ಸಚಿವರು ಫೆ.17ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ, ಅಪರಾಹ್ನ 1:00 ಗಂಟೆಗೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಗೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಬಳಿಕ ಮಂಗಳೂರಿಗೆ ತೆರಳಲಿದ್ದಾರೆ.
ಎಚ್.ಎಂ.ರೇವಣ್ಣ ಉಡುಪಿಗೆ
ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಅವರು ಫೆ.18ರಂದು ಉಡುಪಿಗೆ ಆಗಮಿಸಲಿದ್ದು, ಬೆಳಗ್ಗೆ 10:30ಕ್ಕೆ ನಾಯರ್‌ಕೆರೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾರ್ಯಕರ್ತರನ್ನು ಭೇಟಿಯಾವುದ ಲ್ಲದೇ ಬಳಿಕ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ್ ಕೊಡವೂರು ತಿಳಿಸಿದ್ದಾರೆ.





