ಜೂ.17: ಮರಗಳ ತೆರವು ಕುರಿತು ಅಹವಾಲು ಸಭೆ

ಮಂಗಳೂರು, ಜೂ.10: ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಕಾದಿರಿಸಿದ ಜಮೀನಿನಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಚಣೆಯಾಗಿರುವ 50ಕ್ಕಿಂತ ಹೆಚ್ಚು ಮರಗಳನ್ನು ಗುರುತಿಸಲಾಗಿದೆ.
ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ನಿಯಮಗಳ ಅನ್ವಯ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ.
ಜೂ.17ರಂದು ಪೂ.11ಕ್ಕೆ ಬೆಳ್ತಂಗಡಿ ವನ್ಯಜೀವಿ ವಲಯ ಅರಣ್ಯ ಅಧಿಕಾರಿ ಕಚೇರಿಯ ಆವರಣದಲ್ಲಿ ಸಾರ್ವಜನಿಕ ಅಹವಾಲು ಸಭೆ ಕರೆಯಲಾಗಿದೆ. ಈ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ ಹಾಜರಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದು ಎಂದು ಮಂಗಳೂರು ವೃಕ್ಷಾಧಿಕಾರಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story