ಸೆ.17ರಂದು ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಕೊಳ್ಕೆಬೈಲು ಕಿಶನ್ ಹೆಗ್ಡೆ ಅಧಿಕಾರ ಸ್ವೀಕಾರ

ಉಡುಪಿ, ಸೆ.15: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೊಳ್ಕೆಬೈಲು ಕಿಶನ್ ಹೆಗ್ಡೆ ಅವರು ಸೆ.17ರ ಗುರುವಾರ ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತ ವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ನಿರ್ಗಮನ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೆಪಿಸಿಸಿ ಕಾರ್ಯಾ ಧ್ಯಕ್ಷ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್‌ಕುಮಾರ ಸೊರಕೆ, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಐವನ್ ಡಿ’ಸೋಜಾ, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಉಪಾಧ್ಯಕ್ಷ ಕೆ. ಹರೀಶ್‌ಕುಮಾರ್,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ ಮುದ್ರಾಡಿ, ಮಾಜಿ ಶಾಸಕರಾದ ಗೋಪಾಲ್ ಪೂಜಾರಿ, ಸುಕುಮಾರ್ ಶೆಟ್ಟಿ, ಮುಖಂಡರಾದ ಉದಯ್ ಕುಮಾರ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ರಾಜು ಪೂಜಾರಿ ಮುಂತಾದವರು ಉಪಸ್ಥಿತರಿರುವರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.




