ನ.17ರಂದು ನೇರ ಸಂದರ್ಶನ

ಉಡುಪಿ, ನ.12: ನಗರದ ನಿಟ್ಟೂರಿನಲ್ಲಿರುವ ಆಭರಣ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇಲ್ಲಿ ನವೆಂಬರ್ 17ರಂದು ಬೆಳಗ್ಗೆ 10:30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿ ಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ; 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Next Story




