Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜ.17ರಿಂದ ಕರ್ನಾಟಕ ಕ್ರೀಡಾಕೂಟ-2025:...

ಜ.17ರಿಂದ ಕರ್ನಾಟಕ ಕ್ರೀಡಾಕೂಟ-2025: ಹೇರೂರು ಬಳಿ ಮಡಿಸಾಲು ಹೊಳೆಯಲ್ಲಿ ಕಯಾಕಿಂಗ್ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ16 Jan 2025 8:16 PM IST
share
ಜ.17ರಿಂದ ಕರ್ನಾಟಕ ಕ್ರೀಡಾಕೂಟ-2025: ಹೇರೂರು ಬಳಿ ಮಡಿಸಾಲು ಹೊಳೆಯಲ್ಲಿ ಕಯಾಕಿಂಗ್ ಸ್ಪರ್ಧೆ

ಉಡುಪಿ, ಜ.16: ಬೆಂಗಳೂರು, ಹುಬ್ಬಳ್ಳಿ-ಧಾರವಾಡ ಬಳಿಕ ಇದೀಗ ಕರಾವಳಿಗೆ ಬಂದಿರುವ ಮೂರನೇ ಕರ್ನಾಟಕ ಕ್ರೀಡಾಕೂಟ-2025ಕ್ಕೆ ಶುಕ್ರವಾರ ಬೆಳಗ್ಗೆ ಕಯಾಕಿಂಗ್ ಸ್ಪರ್ಧೆಯೊಂದಿಗೆ ಚಾಲನೆ ದೊರೆಯಲಿದ್ದು, ಬ್ರಹ್ಮಾವರ ತಾಲೂಕಿನ ಹೇರೂರು ಬಳಿಯ ಮಡಿಸಾಲು ಹೊಳೆಯಲ್ಲಿ ಈ ಸ್ಪರ್ಧೆ ನಡೆಯಲಿದೆ.

ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಹೇರೂರು ಸೇತುವೆಯ ಪಕ್ಕದಲ್ಲೇ ಸ್ಪರ್ಧಾ ತಾಣವಿದ್ದು, ನಾಳೆ ಬೆಳಗ್ಗೆ 8ರಿಂದ ಅಪರಾಹ್ನ 12ಗಂಟೆಯವರೆಗೆ ಕಯಾಕಿಂಗ್ ಹಾಗೂ ಕೆನೋಯ್‌ನ ಸ್ಪ್ರಿಂಟ್ ಸ್ಪರ್ಧೆಗಳು ನಡೆಯಲಿವೆ. ಪುರುಷರ ಹಾಗೂ ಮಹಿಳೆ ಯರ ವಿಭಾಗಗಳಲ್ಲಿ 200ಮೀ. ಹಾಗೂ 500ಮೀ. ಸ್ಪರ್ಧೆಗಳಲ್ಲಿ ಹೀಟ್ಸ್, ಸೆಮಿಫೈನಲ್ ಹಾಗೂ ಫೈನಲ್ ಸ್ಪರ್ಧೆಗಳು ನಡೆಯಬೇಕಾಗಿದೆ ಎಂದು ರಾಜ್ಯ ಕಯಾಕಿಂಗ್ ಹಾಗೂ ಕನೂಯಿಂಗ್ ಸಂಸ್ಥೆಯ ಅಧಿಕಾರಿ ತಿಳಿಸಿದ್ದಾರೆ.

ಸ್ಪರ್ಧೆಗಳು ಸಿಂಗಲ್, ಡಬಲ್ ಹಾಗೂ ಮಿಕ್ಸೆಡ್ ಡಬಲ್ ವಿಭಾಗಗಳಲ್ಲಿ ನಡೆಯಲಿವೆ. ಪ್ರತಿ ವಿಭಾಗದಲ್ಲೂ ರಾಜ್ಯದ ಅಗ್ರಗಣ್ಯ ತಲಾ ಎಂಟು ಮಂದಿ ಆಟಗಾರರು ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಗಳೂರು, ಉಡುಪಿ, ಚಿಕ್ಕಮಗಳೂರು, ದಾವಣಗೆರೆ ಹಾಗೂ ಕಾರವಾರದಿಂದ ಸ್ಪರ್ಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು.

ವಿವಿಧ ಸ್ಪರ್ಧೆಗಳ ಮೂಲಕ ರಾಷ್ಟ್ರೀಯ ಕ್ರೀಡಾಕೂಟಕ್ಕೆ ರಾಜ್ಯದಿಂದ ಆಯ್ಕೆಯಾಗಿರುವ ಬೆಂಗಳೂರಿನ ಸಮರ್ ಎ.ಚಾಕೋ ಅವರು ನಾಳೆ ಇಲ್ಲಿ ಸ್ಪರ್ಧಿಸುವ ಸ್ಪರ್ಧಾಳುಗಳಲ್ಲಿ ಪ್ರಮುಖರು. ಅಲ್ಲದೇ ರಾಜ್ಯ ಮಟ್ಟದಲ್ಲಿ ಮಿಂಚಿರುವ ದಾದಾಪೀರ್, ನಾಗೇಶ್ ನಾಯಕ್, ಧನಲಕ್ಷ್ಮೀ, ಐಶ್ವರ್ಯ ಹಾಗೂ ಪ್ರಾಂಜಲ ಶೆಟ್ಟಿ ಅವರ ಸಹ ಇದರಲ್ಲಿ ಪಾಲ್ಗೊಳ್ಳು ತಿದ್ದಾರೆ ಎಂದು ಅವರು ತಿಳಿಸಿದರು.

ನಾಳಿನ ಸ್ಪರ್ಧೆ ಅಪರಾಹ್ನ 12ಗಂಟೆಯವರೆಗೆ ಮಾತ್ರ ನಡೆಯಲಿದೆ. ಇದರಲ್ಲಿ ಕಯಾಕಿಂಗ್ ಹಾಗೂ ಕನೊಯಿಂಗ್‌ನ 500ಮೀ. ಸ್ಪರ್ಧೆಗಳು ಮಾತ್ರ ಆಯೋಜನೆಗೊಳ್ಳಲಿವೆ. ಆ ಬಳಿಕ ಎಲ್ಲಾ ಸ್ಪರ್ಧಾಳುಗಳು ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯುವ ಮಂಗಳೂರಿಗೆ ತೆರಳಲಿದ್ದು, ಅದರಲ್ಲಿ ಭಾಗವಹಿಸಲಿದ್ದಾರೆ.

ಜ.18ರಂದು ಬೆಳಗ್ಗೆ 8ಗಂಟೆಗೆ ಸ್ಪರ್ಧೆಗಳು ಪುನರಾರಂಭಗೊಳ್ಳಲಿದ್ದು, ಕಯಾಕಿಂಗ್, ಕನೂಯಿಂಗ್ 200ಮೀ. ಸ್ಪ್ರಿಂಟ್ ಅಲ್ಲದೇ 500ಮೀ. ಹಾಗ 200ಮೀ. ದೂರದ ಮಿಕ್ಸೆಡ್ ಡ್ರ್ಯಾಗನ್ ಬೋಟ್ ರೇಸ್ ಸ್ಪರ್ಧೆಗಳು ನಡೆಯಲಿವೆ. 19ರಂದು ಮಹಿಳೆಯರು ಹಾಗೂ ಪುರುಷರ ಕೆನೊಯ್ ಸ್ಲಲೋಮ್ ಸ್ಪರ್ಧೆಗಳು ನಡೆಯಲಿವೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X