ಫೆ.17-24: ಉಡುಪಿ ಜಿಲ್ಲೆಯಲ್ಲಿ ವಾಹನ ಸಂಚಾರ ಗಣತಿ

ಉಡುಪಿ: ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಗಣತಿಯು ಫೆಬ್ರವರಿ 17ರ ಬೆಳಗ್ಗೆ 6ರಿಂದ ಫೆಬ್ರವರಿ 24ರ ಬೆಳಗ್ಗೆ 6 ಗಂಟೆಯವರೆಗೆ ನಡೆಯಲಿದೆ.
ಜಿಲ್ಲೆಯಲ್ಲಿ ಸುಮಾರು 78 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾ ಗಿದ್ದು, ವಾಹನ ಸಂಚಾರದ ಬೆಳವಣಿಗೆ ತೀವ್ರತೆಯನ್ನು ಗಮನಿಸಿ ರಸ್ತೆ ಅಭಿವೃದ್ಧಿಪಡಿಸುವುದು ಈ ಗಣತಿಯ ಮುಖ್ಯ ಉದ್ದೇಶವಾಗಿದೆ. ವಾಹನಗಳ ಸಂಚಾರದ ವಿವರಗಳನ್ನು ಸಂಗ್ರಹಿಸಲು ಜಿಲ್ಲೆಯ ಗಣತಿ ಕೇಂದ್ರಗಳಲ್ಲಿ ಸಹಾಯಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳನ್ನು ನೇಮಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story





