ಅ.18ರಂದು ‘ಕನ್ನಡ ಮನಸ್ಸು ಕಂಡ ಗಾಂಧಿ’ ವಿಶೇಷ ಉಪನ್ಯಾಸ
ಉಡುಪಿ, ಅ.16: ಕರ್ನಾಟಕ ಸಾಹಿತ್ಯ ಅಕಾಡೆಮಿ ಉಡುಪಿ ಚಕೋರ ಸಾಹಿತ್ಯ ವಿಚಾರ ವೇದಿಕೆ, ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಸಹಯೋಗದೊಂದಿಗೆ ‘ಕನ್ನಡ ಮನಸ್ಸು ಕಂಡ ಗಾಂಧಿ’ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅ.18ರಂದು ಬೆಳಗ್ಗೆ 10.30ಕ್ಕೆ ಕಾಲೇಜಿನ ಎ.ವಿ.ಹಾಲ್‌ನಲ್ಲಿ ಆಯೋಜಿಸಲಾಗಿದೆ.
ಕಾರ್ಕಳ ಶ್ರೀಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ್ ಎ.ಕೋಟ್ಯಾನ್ ಅಧ್ಯಕ್ಷತೆ ವಹಿಸಲಿರು ವರು. ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಸುಧಾಕರ ದೇವಾಡಿಗ ಉಪನ್ಯಾಸ ನೀಡಲಿರುವರು. ಅಕಾಡೆಮಿ ಸದಸ್ಯ ಜಯಪ್ರಕಾಶ್ ಶೆಟ್ಟಿ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಈಶ್ವರ ಭಟ್, ಐಕ್ಯುಎಸಿ ಸಂಚಾಲಕ ಪ್ರೊ.ಲಕ್ಷ್ಮೀನಾರಾಯಣ ಭಟ್, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ವನಿತಾ ಶೆಟ್ಟಿ, ಚಕೋರ ಸಂಚಾಲಕರಾದ ಶಾಲಿನಿ ಯು.ಬಿ., ರಾಮಾಂಜಿ ಭಾಗವಹಿಸಲಿ ರುವರು ಎಂದು ಪ್ರಕಟಣೆ ತಿಳಿಸಿದೆ.
Next Story





