ಅ.18ರಂದು ಉನ್ನತ ಶಿಕ್ಷಣ ಸಚಿವರು ಬೆಳಪು, ಬಾರಕೂರಿಗೆ ಭೇಟಿ

ಉಡುಪಿ, ಅ.17: ಕರ್ನಾಟಕ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ ಸುಧಾಕರ್ ಅವರು ಅ.18ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಶನಿವಾರ ಬೆಳಗ್ಗೆ 10:30ಕ್ಕೆ ಕಾಪು ತಾಲೂಕು ಬೆಳಪು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ವಿ.ವಿ. ಸ್ನಾತಕೋತ್ತರ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಗಳ ಪರಿಶೀಲನೆ ನಡೆಸುವ ಸಚಿವರು, ಅಪರಾಹ್ನ 12 ಗಂಟೆಗೆ ಉಡುಪಿ ತಾಲೂಕು ಬಾರಕೂರಿನಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಅಪರಾಹ್ನ 1:30ಕ್ಕೆ ಉಡುಪಿಯ ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ ಕಾಯಕರ್ತರನ್ನು ದ್ದೇಶಿಸಿ ಮಾತನಾಡುವರು. ಬಳಿಕ 3:30ಕ್ಕೆ ಉಡುಪಿಯಿಂದ ರಸ್ತೆ ಮೂಲಕ ಮಂಗಳೂರಿಗೆ ತೆರಳಿ ಅಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
Next Story





