ಸೆ.18: ಹೆಬ್ರಿಯಲ್ಲಿ ಸಿಎಂ ಡಿಕೆಶಿಯಿಂದ ಕಸ್ತೂರಿರಂಗನ್ ವರದಿ ಸಂಬಂಧಪಟ್ಟು ಸಭೆ

ಉಡುಪಿ: ಸೆ.18ರಂದು ಶುಕ್ರವಾರ ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲಿರುವ ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಳಿಕ ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಸಮಾಲೋಚನಾ ಸಭೆಯನ್ನು ನಡೆಸಲಿದ್ದಾರೆ.
ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೆಬ್ರಿಗೆ ಆಗಮಿಸುವ ಮುಖ್ಯಮಂತ್ರಿಗಳು ಅಪರಾಹ್ನ 3:00ಗಂಟೆಗೆ ಈ ಸಭೆಯನ್ನು ನಡೆಸಲಿದ್ದಾರೆ. ಸಂಜೆ 5ಗಂಟೆಗೆ ಅವರು ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ಮರಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ಅಧಿಕೃತ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.
ಮರುದಿನ ಮುಖ್ಯಮಂತ್ರಿಗಳು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹಾಗೂ ಬಾಳೆಹೊನ್ನೂರುಗಳಲ್ಲೂ ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯಗಳನ್ನು ಪಡೆಯಲಿದ್ದಾರೆ.
Next Story




