ನ.18ರಂದು ಎಸ್ಐಆರ್ ವಿರುದ್ಧ ಪ್ರತಿಭಟನೆ

ಉಡುಪಿ, ನ.17: ಮತದಾರರ ಹಕ್ಕುಗಳು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಬದ್ಧ ಮತದಾನದ ಹಕ್ಕಿನ ರಕ್ಷಣೆಗಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನ.18ರಂದು ಬೆಳಗ್ಗೆ 10ಗಂಟೆಯಿಂದ ಸಂಜೆ 4 ಗಂಟೆವರೆಗೆ ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಧರಣಿಯನ್ನು ಆಯೋಜಿಸಲಾಗಿದೆ.
ಧರಣಿಯಲ್ಲಿ ಎಸ್ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿ ಅಂಗಡಿ ಚಂದ್ರು, ಎಸ್ಡಿಟಿಯು ರಾಜ್ಯಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಮೊದಲಾದವರು ಭಾಗವಹಿಸಲಿರುವರು ಎಂದು ಎಸ್ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಆಸೀಫ್ ಕೋಟೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story




