ಫೆ.19: ಉಡುಪಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ

ಉಡುಪಿ, ಫೆ.18: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತಂತೆ ಕ್ಷೇತ್ರ ಮಟ್ಟದ ವಿವಿಧ ಇಲಾಖೆಗಳ ಭಾಗೀದಾರರಿಗೆ ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಕ್ರಮವನ್ನು ಫೆ.19ರ ಬೆಳಗ್ಗೆ 10 ಗಂಟೆಗೆ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ದರ್ಶಿ ಶರ್ಮಿಳಾ ಎಸ್ ಉದ್ಘಾಟಿಸಲಿದ್ದು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಾಜು ಮೊಗೇರ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಯ್ಯ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೊನಾಲ್ಡ್ ಬಿ. ಪುರ್ಟಾಡೊ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ, ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನಿ ಭಾಗವಹಿಲಿದ್ದು, ಜಿಲ್ಲಾ ವಕೀಲರು ಹಾಗೂ ಉಪ ಕಾನೂನು ನೆರವು ಅಧೀಕ್ಷಕ ಶ್ರೀನಿವಾಸ ಉಪಾಧ್ಯ. ಬಿ ನೇಟಿವ್ ಸಂಸ್ಥೆಯ ಮುಖ್ಯಸ್ಥ ಪ್ರೇಮಾನಂದ ಕಲ್ಮಾಡಿ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.







