ಜೂ.19: ಜಿಲ್ಲಾ ಉಸ್ತುವಾರಿ ಸಚಿವೆ ಉಡುಪಿಗೆ ಭೇಟಿ

ಉಡುಪಿ, ಜೂ.18: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಅವರು ಜೂ.19ರಿಂದ 21ರವರೆಗೆ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜೂ.19ರ ಗುರುವಾರ ಸಂಜೆ 8:00ಗಂಟೆಗೆ ಬೆಂಗಳೂರಿನಿಂದ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡುವ ಸಚಿವೆ, ಶುಕ್ರವಾರ ಬೆಳಗ್ಗೆ ಜಿಲ್ಲಾಧಿಕಾರಿ ಕಚೇರಿಯ ಜಿಪಂ ಸಭಾಂಗಮದಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಅಪರಾಹ್ನ 2ಗಂಟೆಗೆ ಜಿಪಂ ಸಭಾಂಗಣದಲ್ಲಿ ಉಡುಪಿ ಹಾಗೂ ಬ್ರಹ್ಮಾವರ ತಾಲೂಕಿನ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಲಿದ್ದಾರೆ.
ಜೂ.21ರ ಶನಿವಾರ ಬೆಳಗ್ಗೆ 7:00ಗಂಟೆಗೆ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, 10ಗಂಟೆಗೆ ಬೈಂದೂರಿನಲ್ಲಿ ತಹಶೀಲ್ದಾರ್ ಕಚೇರಿ ಸಮೀಪ ಇಂದಿರಾ ಕ್ಯಾಂಟೀನ್‌ನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅಲ್ಲಿನ ರೋಟರಿ ಭವನದಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿದ್ದಾರೆ.
ಬೈಂದೂರಿನ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗ್ಗೆ 11:45ಕ್ಕೆ ಕಾಂಗ್ರೆಸ್ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಚಿವೆ ಅಪರಾಹ್ನ 3:00ಕ್ಕೆ ಕಾಪುವಿನ ತಹಶೀಲ್ದಾರ್ ಕಚೇರಿ ಬಳಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಲಿದ್ದಾರೆ. ಕಾಪುವಿನಿಂದ ಅವರು ಬಜಪೆ ವಿಮಾನ ನಿಲ್ದಾಣಕ್ಕೆ ತೆರಳಿ ಸಂಜೆ 6:00ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.







