Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಡಿ.3ರಂದು 19ನೇ ಕಾರ್ಕಳ ತಾಲೂಕು ಕನ್ನಡ...

ಡಿ.3ರಂದು 19ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ30 Nov 2023 4:52 PM IST
share
ಡಿ.3ರಂದು 19ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಕಾರ್ಕಳ : 19ನೇ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸಮ್ಮೇಳನಾಧ್ಯಕ್ಷ ಸೂಡ ಸದಾನಂದ ಶೆಣೈ ಅವರ ಅಧ್ಯಕ್ಷತೆಯಲ್ಲಿ ಡಿ.3ರಂದು ನಡೆಯಲಿದೆ ಎಂದು ತಾಲೂಕು ಕ.ಸಾ.ಪ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು.

ಅವರು ಕಾರ್ಕಳದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧ್ವಜಾರೋಹಣವನ್ನು ಅಜೆಕಾರ್ ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ| ಸುಧಾಕರ ಶೆಟ್ಟಿ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಕುಕ್ಕುಂದೂರು ಗ್ರಾ.ಪಂ. ಅಧ್ಯಕ್ಷೆ ಉಷಾ ಕೆ, ಜ್ಞಾನಸುಧಾ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ. ಕೊಡವೂರು, ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ನ ಸಾರ್ವಜನಿಕ ಸಂಪರ್ಕಾಧಿಕಾರಿ ಜ್ಯೋತಿ ಪದ್ಮನಾಭ ಭಂಡಿ ಉಪಸ್ಥಿತರಿದ್ದಾರೆ. ಬೆಳಗ್ಗೆ 9.30ಕ್ಕೆ ಶ್ರೀ ದುರ್ಗಾ ಹಿ ಪ್ರಾ. ಶಾಲೆಯಿಂದ ಸಮ್ಮೇಳನಾಧ್ಯಕ್ಷರನ್ನು ಸ್ವಾಗತಿಸಲಾಗುತ್ತದೆ. ಹಾಗೂ ಕನ್ನಡ ಮಾತೆ ಶ್ರೀ ಭುವನೇಶ್ವರಿ ದೇವಿಯ ಶೋಭಾಯಾತ್ರೆ ನಡೆಯಲಿದೆ.

ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷ ಸಮ್ಮೇಳನದ ಮೆರವಣಿಗೆ ಉದ್ಘಾಟಿಸಲಿದ್ದಾರೆ. ಹಿರಿಯ ಉದ್ಯಮಿ ಬೋಳ ಪ್ರಭಾಕರ ಕಾಮತ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ವಿ. ಸುನಿಲ್ ಕುಮಾರ್ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಸೂಡ ಸದಾನಂದ ಶೆಣೈ ಸಮ್ಮೇಳನಾಧ್ಯಕ್ಷತೆ‌ ಸ್ಥಾನ ವಹಿಸಲಿದ್ದಾರೆ. ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಲಿದ್ದಾರೆ, ನಿಕಟಪೂರ್ವ ಸಮ್ಮೇಳನಾಧ್ಯಕ್ಷೆ ಡಾ| ಯು.ಬಿ.ರಾಜಲಕ್ಷ್ಮೀ, ಲೇಖಕಿ ಅವನೀ ಉಪಾಧ್ಯಾಯಯವರ ರಾಮಾಯಣ ಸಿರಿ ಪುಸ್ತಕವನ್ನು ಡಾ| ಸುಧಾಕರ ಶೆಟ್ಟಿ ಬಿಡುಗಡೆಗೊಳಿಸಲಿದ್ದಾರೆ. ಹಲವು ಮಂದಿ ಗಣ್ಯರು ಉಪಸ್ಥಿತರಿರಲಿದ್ದಾರೆ. ಬಳಿಕ ವಿವಿಧ ಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ಸಂಜೆ ಸಮಾರೋಪ ನಡೆಯಲಿದ್ದು, ನಿವೃತ್ತ ಕನ್ನಡ ಉಪನ್ಯಾಸಕ ಎಸ್. ರಾಮ ಭಟ್ ಸಮಾರೋಪ ಭಾಷಣ ನೆರವೇರಿಸಲಿದ್ದಾರೆ.

ಈ ಸಂದರ್ಭ ವಿವಿಧ ಕ್ಷೇತ್ರದ ಸಾಧಕರಾದ ಹರ್ಷಿಣಿ, ಬಾಬು ಕೆ. ಇನ್ನಾ, ರವೀಂದ್ರ ಕುಮಾರ್, ವೆಲೇರಿಯನ್ ಲೋಬೋ ಸಾಣೂರು, ಬಾಲಕೃಷ್ಣ ಭೀಮಗುಳಿ, ಮೋಹನ ಶ್ರೀರಮಣ ಆಚಾರ್, ಜನಾರ್ದನ ಆಚಾರ್ಯ, ವಸಂತ ಮೂಲ್ಯ, ಮೊಹಮ್ಮದ್ ಗೌಸ್ ಹಾಗೂ ಛತ್ರಪತಿ ಫೌಂಡೇಶನ್ ಕಾರ್ಕಳ ಮತ್ತು ಹೊಸಬೆಳಕು ಕಣಜಾರು ಈ ಸಂಸ್ಥೆಗಳನ್ನು ಸಮ್ಮಾನಿಸಲಾಗುತ್ತದೆ. ಉದ್ಯಮಿ ಎಸ್‍ಕೆಎಫ್ ಮೂಡುಬಿದಿರೆ ಸಂಸ್ಥಾಪಕ ಡಾ. ರಾಮಕೃಷ್ಣ ಆಚಾರ್ ಸಾಧಕರನ್ನು ಸಮ್ಮಾನಿಸಲಿದ್ದಾರೆ ಹಾಗೂ ವಿವಿಧ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೋಶಾಧಿಕಾರಿ ಅರುಣ್ ರಾವ್ ಮುಂಡ್ಕೂರು, ಕಾರ್ಯದರ್ಶಿ ಸುಧಾಕರ ಪೊಸ್ರಾಲು, ಶಿವ ಸುಬ್ರಹ್ಮಣ್ಯ, ಲಕ್ಷ್ಮೀ ಹೆಗ್ಡೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X