2 ವಾರಗಳಲ್ಲಿ ಅಂಬಾಗಿಲು, ಬಲಾಯಿಪಾದೆಯಲ್ಲಿ ಸಿಗ್ನಲ್‌ಲೈಟ್ ಅಳವಡಿಕೆ

ಉಡುಪಿ, ಫೆ.3: ಅಂಬಾಗಿಲು ಮತ್ತು ಉದ್ಯಾವರ ಬಲಾಯಿಪಾದೆಯ ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಲು ಸಿದ್ಧತೆ ನಡೆಸಲಾಗುತ್ತಿದೆ.
ಮಂಗಳವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಈ ಎರಡು ಜಂಕ್ಷನ್‌ಗಳಲ್ಲಿ ಇನ್ನೂ ಎರಡು ವಾರಗಳಲ್ಲಿ ಸಿಗ್ನಲ್ ಲೈಟ್ ಸಿದ್ಧವಾಗಲಿದೆ. ಈ ಸಂಬಂಧ ಸ್ಥಳ ಪರಿಶೀಲನೆ ನಡೆಸಿ ಪರಿಸರದ ವ್ಯಾಪಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಉಪಸ್ಥಿತರಿದ್ದರು.
Next Story





