ಅ.20ರಂದು ಬೃಹತ್ ರಕ್ತದಾನ ಶಿಬಿರ

ಉಡುಪಿ, ಅ.16: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಹಾಗೂ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರವನ್ನು ಅ.20ರಂದು ಬೆಳಗ್ಗೆ 8ಗಂಟೆಯಿಂದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದೆ.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ರಕ್ತದ ಕೊರತೆ ಇರುವುದನ್ನು ಮನಗಂಡು ಅಲ್ಲಿನ ಅರ್ಥಿಕ ಅಶಕ್ತ ರೋಗಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡು ವುದರ ಮೂಲಕ ಈ ಶಿಬಿರವನ್ನು ಯಶಸ್ವಿಗೊಳಿಸುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story





