ಜೂ.20ರಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಜೂ.18: ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜೂ.20ರಂದು ಮಧ್ಯಾಹ್ನ 2:30 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜರಗಲಿದೆ.
ಸಭೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಉಪಾಧ್ಯಕ್ಷರುಗಳಾದ ಐವನ್ ಡಿಸೋಜ ಹಾಗೂ ಎಂ.ಎ.ಗಫೂರ್, ಕೆ. ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮೊದಲಾದವರು ಭಾಗವಹಿಸಲಿರುವನರು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





