ಜೂ.20ರಂದು ಪೊಳಲಿ ಪ್ರಶಸ್ತಿ ಪ್ರದಾನ

ಉಡುಪಿ, ಜೂ.19: ಪೊಳಲಿ ಶೀನಪ್ಪ ಹೆಗ್ಗಡೆ ಮತ್ತು ಎಸ್.ಆರ್. ಹೆಗ್ಡೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ.20ರ ಶನಿವಾರ ಬೆಳಗ್ಗೆ 10 ಗಂಟೆಗೆ ಎಂ.ಜಿ.ಎಂ ಕಾಲೇಜಿನ ಆವರಣದಲ್ಲಿರುವ ನೂತನ ರವೀಂದ್ರ ಮಂಟಪ ದಲ್ಲಿ ನಡೆಯಲಿದೆ.
ಪ್ರಶಸ್ತಿಯನ್ನು ಹಿರಿಯ ಲೇಖಕ, ಸಂಶೋಧಕರಾದ ಡಾ. ಬಿ. ಶಿವರಾಮ ಶೆಟ್ಟಿ ಇವರಿಗೆ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಸಲಹಾ ಸಮಿತಿ ಅಧ್ಯಕ್ಷ ರಾದ ಪ್ರೊ.ಬಿ.ಎ.ವಿವೇಕ ರೈ ವಹಿಸಲಿದ್ದಾರೆ. ಕಾಸರಗೋಡು ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕರಾದ ಪ್ರೊ. ಚೇತನ್ ಮುಂಡಾಜೆ ಪ್ರಶಸ್ತಿ ಪುರಸ್ಕೃತರ ಕುರಿತು ಅಭಿನಂದನಾ ಮಾತುಗಳನ್ನಾ ಡಲಿದ್ದಾರೆ.
ಪ್ರಶಸ್ತಿ ಪುರಸ್ಕೃತ ಡಾ.ಬಿ.ಶಿವರಾಮ ಶೆಟ್ಟಿ ಅವರು ‘ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎಂ.ಜಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಗಾಯತ್ರಿ ಪೈ ಹಾಗೂ ಚೇಳಾರುಗುತ್ತು ಎಸ್.ಆರ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷೆ ಡಾ.ಇಂದಿರಾ ಹೆಗ್ಡೆ ಉಪಸ್ಥಿತರಿರುವರು ಎಂದು ಸಂಘಟಕರ ಪ್ರಕಟಣೆ ತಿಳಿಸಿದೆ.




