ಆ.20ರಂದು ಡಿ.ದೇವರಾಜ ಅರಸು ಜನ್ಮದಿನಾಚರಣೆ

ಉಡುಪಿ, ಆ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆ.20ರಂದು ಬೆಳಗ್ಗೆ 10:00 ಗಂಟೆಗೆ ನಗರದ ಮಿಷನ್ ಕಂಪೌಂಡ್‌ನ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರು, ಜಿಲ್ಲಾಧಿ ಕಾರಿ ಸ್ವರೂಪ ಟಿ.ಕೆ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮತ್ತಿತರರು ಭಾಗವಹಿಸಲಿದ್ದಾರೆ.
ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜ್ ಅವರು ಡಿ.ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.




