Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 2024ರ ಟೋಕಿಯೋ ಸಾಕ್ಷ್ಯಚಿತ್ರೋತ್ಸವಕ್ಕೆ...

2024ರ ಟೋಕಿಯೋ ಸಾಕ್ಷ್ಯಚಿತ್ರೋತ್ಸವಕ್ಕೆ ಮಾಹೆಯ ಪಿಲಿವೇಷ (ಹುಲಿವೇಷ) ಸಾಕ್ಷ್ಯಚಿತ್ರ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ24 Oct 2024 9:32 PM IST
share
2024ರ ಟೋಕಿಯೋ ಸಾಕ್ಷ್ಯಚಿತ್ರೋತ್ಸವಕ್ಕೆ ಮಾಹೆಯ ಪಿಲಿವೇಷ (ಹುಲಿವೇಷ) ಸಾಕ್ಷ್ಯಚಿತ್ರ ಆಯ್ಕೆ

ಉಡುಪಿ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ನಿರ್ಮಿಸಿದ ತುಳುನಾಡಿನ ಸಾಕ್ಷ್ಯಚಿತ್ರ ‘ಪಿಲಿವೇಷ’ (ಹುಲಿವೇಷ), ಟೋಕಿಯೊ ಸಾಕ್ಷ್ಯಚಿತ್ರ ಚಲನಚಿತ್ರೋತ್ಸವ-2024ರಲ್ಲಿ ಪ್ರದರ್ಶನಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ.

ಈ ಚಲನಚಿತ್ರವನ್ನು ದೃಶ್ಯ ಮಾನವಶಾಸ್ತ್ರ ಮತ್ತು ಎಥ್ನೋಗ್ರಾಫಿಕ್ ಫಿಲ್ಮ್ ವಿಭಾಗದಲ್ಲಿ ಪ್ರದರ್ಶಿಸಲು ಆಯ್ಕೆ ಮಾಡಲಾ ಗಿದೆ. ಪ್ರಪಂಚದಾದ್ಯಂತದಿಂದ ಆಯ್ಕೆಗಾಗಿ ಬಂದ 800ಕ್ಕೂ ಅಧಿಕ ಪ್ರವೇಶಗಳಲ್ಲಿ ಭಾರತದಿಂದ ಆಯ್ಕೆ ಯಾದ ಎರಡು ಸಾಕ್ಷ್ಯಚಿತ್ರಗಳಲ್ಲಿ ಮಾಹೆಯ ಪಿಲಿವೇಷವೂ ಒಂದಾಗಿದೆ ಎಂದು ಮಾಹೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಾಕ್ಷ್ಯಚಿತ್ರವನ್ನು ಡಿ.5ರಂದು ಉತ್ಸವದ ಭಾಗವಾಗಿ ಪ್ರದರ್ಶಿಸಲು ನಿರ್ಧರಿಸಲಾಗಿದೆ. ಟೋಕಿಯೊ ಸಾಕ್ಷ್ಯಚಿತ್ರ ಉತ್ಸವ ನವೆಂಬರ್ 30ರಿಂದ ಡಿಸೆಂಬರ್ 13ರವರೆಗೆ ನಡೆಯಲಿದೆ. ಈ ಸಾಕ್ಷ್ಯಚಿತ್ರವನ್ನು ಮಾಹೆಯ ಇಂಟರ್ ಕಲ್ಚರಲ್ ಸ್ಟಡೀಸ್ ಮತ್ತು ಡೈಲಾಗ್ ಕೇಂದ್ರದ (ಸಿಐಎಸ್‌ಡಿ) ಸಂಯೋಜಕ ಡಾ. ಪ್ರವೀಣ್ ಕೆ ಶೆಟ್ಟಿ ಹಾಗು ಸಂಸ್ಥೆಯಲ್ಲಿ ಸಂಶೋಧನಾ ಸಹವರ್ತಿಯಾಗಿರುವ ನಿತೇಶ್ ಆಂಚನ್ ನಿರ್ದೇಶಿಸಿದ್ದಾರೆ.

ಚಿತ್ರವು ಕರಾವಳಿ ಕರ್ನಾಟಕ ಪ್ರದೇಶಕ್ಕೆ ಸ್ಥಳೀಯವಾದ ಸಾಂಪ್ರದಾಯಿಕ ಜಾನಪದ ನೃತ್ಯವಾದ ಪಿಲಿವೇಷದ ಅನ್ವೇಷಣೆ ಯನ್ನು ನೀಡುತ್ತದೆ. ಸಿಐಎಸ್‌ಡಿ ಮಾಹೆಯ ಯುರೋಪಿಯನ್ ಅಧ್ಯಯನ ಕೇಂದ್ರದ ಭಾಗವಾಗಿದೆ. ಹಾಗೂ ಡಿಸರ್ನಿಂಗ್ ಇಂಡಿಯಾ: ಲಿವಿಂಗ್ ಕಲ್ಚರ್ಸ್ ಆಫ್ ತುಳುನಾಡು ಯೋಜನೆ ಯಲ್ಲಿ ಕಾರ್ಯನಿರ್ವಹಿಸುತ್ತಿದೆ.

2021ರ ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭಗೊಂಡ ಈ ಯೋಜನೆ ತುಳುನಾಡಿನ ಸಾಂಸ್ಕೃತಿಕ ಪರಂಪರೆಯನ್ನು-ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳನ್ನು ಒಳಗೊಳ್ಳುವ ಪ್ರದೇಶವನ್ನು ಆನ್‌ಲೈನ್ ಕೋರ್ಸ್ ಮೂಲಕ ಜಾಗತಿಕ ಪ್ರೇಕ್ಷಕರಿಗೆ ತಲುಪಿಸುವ ಗುರಿಯನ್ನು ಹೊಂದಿದೆ. ಇದು ಸಾಕ್ಷ್ಯಚಿತ್ರಗಳು, ಪರಿಣಿತ ಉಪನ್ಯಾಸಗಳು ಮತ್ತು ಶೈಕ್ಷಣಿಕ ವಾಚನಗೋಷ್ಠಿಯನ್ನು ಒಳಗೊಂಡಿರುತ್ತದೆ.

ಈ ಕೋರ್ಸ್‌ನಲ್ಲಿ ಈಗಾಗಲೇ 450 ವಿದ್ಯಾರ್ಥಿಗಳು ಭಾಗವಹಿಸಿ ಪೂರ್ಣಗೊಳಿಸಿದ್ದಾರೆ. ಕೋರ್ಸ್ ಜೊತೆಗೆ, ಸಿಐಎಸ್‌ಡಿ ತುಳುನಾಡಿನ ಸಂಸ್ಕೃತಿಗಳು ಎಂಬ ಪುಸ್ತಕವನ್ನು ಪ್ರಕಟಿಸಿದೆ. ಇದು ಪ್ರದೇಶದ ಸಾಂಸ್ಕೃತಿಕ ಸಂಪ್ರದಾಯಗಳ ವಿವಿಧ ಅಂಶಗಳ ಒಳನೋಟಗಳು ಮತ್ತು ಮಾಹಿತಿಯನ್ನು ನೀಡುತ್ತದೆ. ಸಿಐಎಸ್‌ಡಿ ಈಗ ಕಂಬಳದ ಸುತ್ತ ಕೇಂದ್ರೀಕೃತವಾಗಿ ರುವ ಹೊಸ ಯೋಜನೆಯ ಮೇಲೆ ಕೇಂದ್ರೀಕರಿಸುತ್ತಿದೆ ಎಂದು ಮಾಹೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X