Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಆ.21ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ...

ಆ.21ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’

ವಾರ್ತಾಭಾರತಿವಾರ್ತಾಭಾರತಿ27 Jun 2026 8:54 PM IST
share
ಆ.21ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’
ಉಡುಪಿ ಜಿಲ್ಲೆಯಲ್ಲಿ 19 ಪ್ರಕರಣಗಳು

ಉಡುಪಿ, ಜೂ.27: ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ (ಸುಪ್ರೀಂ ಕೋರ್ಟ್‌ನಲ್ಲಿ) ದೀರ್ಘಕಾಲದಿಂದ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥ ಪಡಿಸಿಕೊಳ್ಳಲು ಭಾರತದ ಸರ್ವೋಚ್ಛ ನ್ಯಾಯಾಲಯ ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ ಅದಾಲತ್‌ನ್ನು ಆ.21ರಿಂದ 23ರವರೆಗೆ ಮೂರು ದಿನಗಳ ಕಾಲ ಹಮ್ಮಿಕೊಂಡಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ರಾವ್ ತಿಳಿಸಿದ್ದಾರೆ.

ಶನಿವಾರ ಜಿಲ್ಲಾ ನ್ಯಾಯಾಲಯದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸುಪ್ರೀಂ ಕೋರ್ಟ್ ಪ್ರಥಮ ಬಾರಿಗೆ ಇಂಥ ವಿಶೇಷ ಲೋಕಅದಾಲತ್‌ನ್ನು ಆಯೋಜಿಸುತಿದ್ದು, ಇದು ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದರು.

ಇದರಲ್ಲಿ ಉಡುಪಿ ಜಿಲ್ಲೆಯಿಂದ ವಿಚಾರಣೆಗೆ ಬಾಕಿ ಇರುವ 19 ಪ್ರಕರಣಗಳನ್ನು ಗುರುತಿಸಲಾಗಿದೆ. 19 ಪ್ರಕರಣ ಗಳಲ್ಲಿ ಎರಡನ್ನು ಈಗಾಗಲೇ ರಾಜಿ ಇತ್ಯರ್ಥಕ್ಕೆ ಒಪ್ಪಿಸಲಾಗಿದೆ. ಇನ್ನುಳಿದ 17 ಪ್ರಕರಣಗಳನ್ನು ರಾಜಿಯಲ್ಲಿ ಮುಕ್ತಾಯಗೊಳಿಸಲು ಪ್ರಯತ್ನ ನಡೆಯುತ್ತಿದೆ. ಇವುಗಳಿಗೆ ಅಂತಿಮವಾಗಿ ಸಮಾಧಾನ ಸಮಾರೋಹದಲ್ಲಿ ಒಪ್ಪಿಗೆ ಮುದ್ರೆ ಬೀಳಲಿದೆ ಎಂದರು.

ಯ್ಯಾವ್ಯಾವ ಪ್ರಕರಣ: ಬ್ಯಾಂಕಿಂಗ್ ಮತ್ತು ವಿಮಾ ಸಂಬಂಧಿತ ಪ್ರಕರಣಗಳು, ನಾಗರಿಕ ಕಾನನು, ಮೋಟಾರು ಅಪಘಾತ ಪರಿಹಾರ ಪ್ರಕರಣ, ಗ್ರಾಹಕ ವ್ಯಾಜ್ಯಗಳು ಮತ್ತು ರೈತ ಸಮಸ್ಯೆ, ಕ್ರಿಮಿನಲ್ ಪ್ರಕರಣಗಳು, ಕೌಟುಂಬಿಕ ವಿವಾದಗಳು, ಕಾರ್ಮಿಕ ಮತ್ತು ಕೈಗಾರಿಕಾ ವಿವಾದಗಳು, ಭೂಸ್ವಾಧೀನ ಮತ್ತು ಪುನರ್ವಸತಿ, ಆಸ್ತಿ ತೆರಿಗೆ, ಬಾಡಿಗೆ ನಿಯಂತ್ರಣ ಮತ್ತು ಸಾರ್ವಜನಿಕ ಆವರಣ (ತೆರವುಗೊಳಿಸುವಿಕೆ) ಕಾಯ್ದೆ, ಸೇವಾ ಕಾನೂನು ಹಾಗೂ ವರ್ಗಾವಣೆ ಅರ್ಜಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇದರಲ್ಲಿ ಇತ್ಯರ್ಥ ಪಡಿಸಲು ಗುರುತಿಸಲಾಗಿದೆ ಎಂದರು.

ಲೋಕ ಅದಾಲತ್ ಆದೇಶ ಅಂತಿಮ ಆದೇಶವಾಗಿದ್ದು, ಮತ್ತೆ ಅದನ್ನು ಪ್ರಶ್ನಿಸಲು ಅವಕಾಶವಿರುವುದಿಲ್ಲ. ಇಲ್ಲಿ ನ್ಯಾಯಾಲಯದ ಶುಲ್ಕವಿರುವುದಿಲ್ಲ. ಈಗಾಗಲೇ ಶುಲ್ಕ ಪಾವತಿಸಿದ್ದರೆ ಅದನ್ನು ಹಿಂದಿರುಗಿಸಲಾಗುವುದು. ಇದರ ಮೂಲಕ ಪ್ರಕರಣವೊಂದನ್ನು ಸುಲಭ ಹಾಗೂ ವೇಗವಾಗಿ ಇತ್ಯರ್ಥ ಪಡಿಸಿ ಕೊಳ್ಳಬಹುದಾಗಿದೆ ಎಂದು ನಿತಿನ್ ರಾವ್ ತಿಳಿಸಿದರು.

ಆಸಕ್ತಿವುಳ್ಳವರು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಲು ಪ್ರತಿ ತಾಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿರುವ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಬಹುದು. ನ್ಯಾಯಾಂಗ ಅಧಿಕಾರಿಗಳು ಮತ್ತು ತರಬೇತಿ ಪಡೆದ ಮಧ್ಯಸ್ಥದಾರರು, ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಪೂರ್ವ ಲೋಕ ಅದಾಲತ್ ಪ್ರಕ್ರಿಯೆಗಳನ್ನು ನಡೆಸಲಿದ್ದಾರೆ. ಇದು ಪಕ್ಷಗಾರರ ನಡುವೆ ಸೌಹಾರ್ದಯುತ ಲಿಖಿತ ಇತ್ಯರ್ಥಕ್ಕೆ ಸಹಕಾರಿಯಾಗಲಿದೆ ಎಂದು ನಿತಿನ್ ರಾವ್ ತಿಳಿಸಿದರು.

ಜು.11ರಂದು ಲೋಕ ಅದಾಲತ್: ಜುಲೈ 11ರಂದು ರಾಜ್ಯಾದ್ಯಂತ ರಾಷ್ಟ್ರೀಯ ಲೋಕ ಅದಾಲತ್‌ನ್ನು ಹಮ್ಮಿಕೊ ಳ್ಳಲಾಗಿದೆ. ಈ ಲೋಕ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿ ಕೊಳ್ಳಲು ಅವಕಾಶವಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಿರಣ್ ಎಸ್.ಗಂಗಣ್ಣವರ್ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಒಟ್ಟು 34,856 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಇವುಗಳಲ್ಲಿ 3,544 ಪ್ರಕರಣಗಳನ್ನು ರಾಜಿಯಲ್ಲಿ ಇತ್ಯರ್ಥ ಪಡಿಸಲು ಗುರುತಿಸಲಾಗಿದೆ. ಈಗಾಗಲೇ 505 ಕೇಸುಗಳನ್ನು ರಾಜಿಯಲ್ಲಿ ಇತ್ಯರ್ಥ ಪಡಿಸಲು ಒಪ್ಪಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಅಲ್ಲದೇ ಲೋಕಅದಾಲತ್‌ಗೆ ಹೊರತಾದ ಮಧ್ಯಸ್ಥದಾರರ ಮೂಲಕ ಇತ್ಯರ್ಥ ಪಡಿಸಲು ಉಡುಪಿಯಲ್ಲಿ ಒಟ್ಟು 778 ಕೇಸುಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ 125 ಕೇಸುಗಳನ್ನು ಮಧ್ಯಸ್ಥಗಾರರ ನೆರವಿನಿಂದ ಈಗಾಗಲೇ ಇತ್ಯರ್ಥಗೊಳಿಸಲಾಗಿದೆ ಎಂದೂ ಅವರು ಹೇಳಿದರು.

ಟ್ರಾಫಿಕ್ ಕೇಸ್ ಬಾಕಿ ಇಲ್ಲ: ಸಾರಿಗೆ ಇಲಾಖೆಯಲ್ಲಿ ಸರಕಾರ ನೀಡಿರುವ ಶೇ.50ರ ರಿಯಾಯಿತಿಗೆ ಅರ್ಹವಾಗಿರುವ 1992ರಿಂದ 2022ರ ಅವಧಿ ಯಲ್ಲಿ ದಾಖಲಾಗಿರುವ ಟ್ರಾಫಿಕ್ ಉಲ್ಲಂಘನೆಗೆ ಸಂಬಂಧಿಸಿದ ಯಾವುದೇ ಕೇಸ್‌ ಗಳು ಕೋರ್ಟ್‌ನಲ್ಲಿ ಇತ್ಯರ್ಥಕ್ಕೆ ಬಾಕಿ ಇರುವುದಿಲ್ಲ ಎಂದು ಕಿರಣ್ ಎಸ್.ಗಂಗಣ್ಣವರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X